10:57 AM Friday4 - December 2020
ಬ್ರೇಕಿಂಗ್ ನ್ಯೂಸ್
ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ ದುರ್ಬಲವಾಗುತ್ತಿರುವ ಬುರೆವಿ ಚಂಡಮಾರುತ: ನಿಟ್ಟುಸಿರು ಬಿಟ್ಟ ಕೇರಳದ ಜನತೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ: ಇಂದು ಪ್ರಧಾನಿ ಸರ್ವ ಪಕ್ಷ ಸಭೆ ಪ್ರತಿಷ್ಠಿತ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: ಬಿಗಿ ಭದ್ರತೆಯಲ್ಲಿ ಇಂದು ಮತ ಎಣಿಕೆ ಸುಪ್ರೀಂ ಕೋರ್ಟ್ ನಲ್ಲಿ ಸ್ಯಾಂಡಲ್ ವುಡ್ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ… ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ತಡವೇಕೆ?: ಮಾಜಿ ಸಚಿವ ಖಾದರ್… ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ತಲಾ 6 ಲಕ್ಷ ರೂ. ಪರಿಹಾರ… ರೈತರ ಬೆಂಬಲಕ್ಕೆ ನಿಂತ ಅಕಾಲಿ ನಾಯಕ  ಬಾದಲ್ :  ಪದ್ಮವಿಭೂಷಣ ಪ್ರಶಸ್ತಿ ವಾಪಸ್

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಸಭಾಪತಿ ಸ್ಥಾನದಿಂದ ಪ್ರತಾಪ ಚಂದ್ರ ಶೆಟ್ಟಿ ಪದಚ್ಯುತಿ? ಸಂಪುಟದಿಂದ ಕೋಟ ಔಟ್? 

November 20, 2020, 6:48 PM


ಬೆಂಗಳೂರು(reporter Karnataka news):
ರಾಜ್ಯ ವಿಧಾನ ಪರಿಷತ್ ನಲ್ಲಿ ಬಿಜೆಪಿ ಸಂಖ್ಯಾಬಲ ವೃದ್ದಿಯಾಗಿದೆ. ಬಿಜೆಪಿಯ ನಾಲ್ವರು ಅಭ್ಯರ್ಥಿಗಳು ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಆಡಳಿತರೂಢ ಬಿಜೆಪಿ ಬಲ 31ಕ್ಕೇರಿದೆ. ಅದೇ ರೀತಿ ಕಾಂಗ್ರೆಸ್ ಬಲ 29ಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ ಕ್ಕೆ ಸೇರಿದ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ದ ಬಿಜೆಪಿ ಅವಿಶ್ವಾಸ ಗೊತ್ತುವಳಿ ಮಂಡಿಸಿ ಪದಚ್ಯುತಿಗೊಳಿಸುವ ಎಲ್ಲ ಸಿದ್ದತೆಗಳು ನಡೆಯುತ್ತಿದೆ.

ಒಂದು ಕಡೆ ಪ್ರತಾಪ್ ಚಂದ್ರ ಶೆಟ್ಟಿ ಅವರು ವಿಧಾನ ಪರಿಷತ್ ಸಭಾಪತಿ ಹುದ್ದೆಯನ್ನು ಕಳೆದುಕೊಂಡರೆ, ಇನ್ನೊಂದು ಕಡೆ ಬಂದರು ಹಾಗೂ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಚಿವ ಸ್ಥಾನ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಸಂಪುಟ ವಿಸ್ತರಣೆ ವೇಳೆ ಅವರನ್ನು ಕೈಬಿಡುವ ಸಾಧ್ಯತೆಯೇ ಹೆಚ್ಚು. ಬದಲಿಗೆ ಅನುಭವಿ ರಾಜಕಾರಣಿಯಾದ ಶ್ರೀನಿವಾಸ ಪೂಜಾರಿ ಅವರನ್ನು ಪ್ರತಾಪ್ ಚಂದ್ರ ಶೆಟ್ಟಿ ಅವರಿಂದ ತೆರವಾಗುವ ಸಭಾಪತಿ ಸ್ಥಾನಕ್ಕೆ ನೇಮಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ವಿಶೇಷವೆಂದರೆ ಪ್ರತಾಪ್ ಚಂದ್ರ ಶೆಟ್ಟಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಇಬ್ಬರೂ ಉಡುಪಿ ಜಿಲ್ಲೆಗೆ ಸೇರಿದವರಾಗಿದ್ದಾರೆ. ದಕ್ಷಿಣ ಕನ್ನಡದಿಂದ ಹಿರಿಯ ಶಾಸಕ ಅಂಗಾರ ಅಥವಾ ಉಡುಪಿ ಜಿಲ್ಲೆಯಿಂದ ಹಿರಿಯ ನೇತಾರ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು