ಇತ್ತೀಚಿನ ಸುದ್ದಿ
ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಬಳ್ಳಾರಿ ಬಂದ್ ಆರಂಭ: ಬಿಗಿ ಬಂದೋಬಸ್ತ್
November 26, 2020, 9:09 AM

ಬಳ್ಳಾರಿ(reporterkarnataka news): ನೂತನ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಳ್ಳಾರಿ ಬಂದ್ ಗೆ ಇದೀಗ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ ಹೆಸರಿನಲ್ಲಿ ಪ್ರತಿಭಟನೆ ನಡೆಯುತ್ತಿದೆ ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿದ್ದಾರೆ.
ಬಳ್ಳಾರಿ ಬಂದ್ ಕರೆ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ