ಇತ್ತೀಚಿನ ಸುದ್ದಿ
ವಿಜಯೋತ್ಸವದ ವೇಳೆ ವಾಹನ ಪಲ್ಟಿ: ಒಬ್ಬ ಸಾವು, ವಿಜೇತ ಅಭ್ಯರ್ಥಿ ಸಹಿತ 5 ಮಂದಿ ಆಸ್ಪತ್ರೆಗೆ
December 30, 2020, 8:10 PM

ಬಂಟ್ವಾಳ(reporterkarnataka news): ವಿಜಯೋತ್ಸವದ ವೇಳೆ ನಡೆದ ವಾಹನ ದುರ್ಘಟನೆಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಮಹಿಳೆಯರು ಸೇರಿದಂತೆ ಐವರು ಗಾಯಗೊಂಡ ಘಟನೆ ಗೋಳ್ತಮಜಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.
ಗೋಳ್ತಮಜಲು ಗ್ರಾಮ ಪಂಚಾಯಿತಿ ಚುನಾವಣೆಯ ವಿಜಯೋತ್ಸವದ ವೇಳೆ ವಾಹನ ಪಲ್ಟಿಯಾಗಿ ಈ ದುರ್ಘಟನೆ ನಡೆಯಿತು.
ಅಪಘಾತದಲ್ಲಿ ನೆಟ್ಲ ನಿವಾಸಿಯೊಬ್ಬರು
ಮೃತಪಟ್ಟಿದ್ದಾರೆ.ಘಟನೆಯಲ್ಲಿ ವಿಜೇತ ಅಭ್ಯರ್ಥಿ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.
ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ನೆಟ್ಲ ಭಾಗದ ವಿಜಯೋತ್ಸವದ ವೇಳೆ ಘಟನೆ ನಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.