ಇತ್ತೀಚಿನ ಸುದ್ದಿ
ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ: ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ
December 26, 2020, 9:05 AM

ಮಂಗಳೂರು (reporterkarnataka news): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.
ಪ್ರಸ್ತುತ ಸಾಲಿನಲ್ಲಿ ವಿತರಿಸರುವ ರಿಯಾಯಿತಿ ಬಸ್ಸು ಪಾಸುಗಳ ಅವಧಿ ಡಿಸೆಂಬರ್ 31ಕ್ಕೆ ಮುಕ್ತಾಯಗೊಳ್ಳಲಿದ್ದು, 2021ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 15 ರಿಂದ ನವೀಕರಿಸಿ ಹೊಸ ಪಾಸುಗಳನ್ನು ನೀಡಲಾಗುತ್ತದೆ. ಪ್ರಸ್ತುತ ಸಾಲಿನಲ್ಲಿ ವಿತರಿಸಿದ ಪಾಸುಗಳನ್ನು ಫೆಬ್ರವರಿ 28ರವರೆಗೆ ಮಾನ್ಯ ಮಾಡಲಾಗುವುದು.