ಇತ್ತೀಚಿನ ಸುದ್ದಿ
ವಿಶೇಷ ಕಾರ್ಯಪಡೆ ಕಾರ್ಯಾಚರಣೆ: ತೆಲಂಗಾಣದಲ್ಲಿ ಇಬ್ಬರು ನಕ್ಸಲೀಯರ ಹತ್ಯೆ
September 20, 2020, 10:05 AM

ಹೈದರಾಬಾದ್(reporterkarnataka news): ತೆಲಂಗಾಣದಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ವಿಶೇಷ ಕಾರ್ಯಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾರೆ.
ತೆಲಂಗಾಣದ ಆಸೀಫಾಬಾದ್ ಜಿಲ್ಲೆಯ ಈಸ್ಗಾಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.
ಕಬಂಡ ಅರಣ್ಯದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಜಾರ್ಖಂಡ್ ನಿಂದ ಪಲಾಯನ ಮಾಡಿರುವ ನಕ್ಸಲ್ ಗುಂಪುಗಳು ತೆಲಂಗಾಣದಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿವೆ ಎಂದು ವರದಿಯಾಗಿದೆ.