5:38 AM Monday1 - March 2021
ಬ್ರೇಕಿಂಗ್ ನ್ಯೂಸ್
ಬಿಜೆಪಿ ಯುವ ಮೋರ್ಚಾ ನರಗುಂದ ಮಂಡಲ ವತಿಯಿಂದ ಗ್ರಾಮದಲ್ಲಿ ಸ್ವಚ್ಚತಾ ಕಾರ್ಯಕ್ರಮ ಜಾತಿ, ಮತ, ಕಟ್ಟುಪಾಡುಗಳನ್ನು ಮೀರಿ ಜನಪದ ಜನಮಾನಸದಲ್ಲಿ ನೆಲೆಗೊಂಡಿದೆ: ಎಡನೀರು ಮಠಾಧೀಶರು ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಸಚಿವ ಅಂಗಾರ ತವರಿನಲ್ಲಿ ಭಿನ್ನಮತ ಸ್ಫೋಟ: 3 ಮಂದಿ ಹಿರಿಯ ನಾಯಕರು ಬಿಜೆಪಿಯಿಂದ… ಅಥಣಿ ತಾಲೂಕಿನ ರಡೇರಹಟ್ಟಿ ಗ್ರಾಮದಲ್ಲಿ  ಆಕಸ್ಮಿಕವಾಗಿ ಬೆಂಕಿ ತಗುಲಿ ಗುಡಿಸಲು ಭಸ್ಮ: 4… ಒಂದೂವರೆ ತಿಂಗಳ ಅವಧಿಯಲ್ಲಿ 10 ಬಾರಿ ಇಂಧನ ದರ ಏರಿಕೆ: ಕೆಪಿಸಿಸಿ ಅಧ್ಯಕ್ಷ… ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆ: ಮಿನಿ ವಿಧಾನ ಸೌಧದ ಎದುರು ಎಬಿವಿಪಿ ಪ್ರತಿಭಟನೆ;… ಮಂಗಳೂರು ಮಹಾನಗರಪಾಲಿಕೆ  2020-21ನೇ  ಸಾಲಿನ ತೆರಿಗೆ ಪೂರ್ತಿ ಪಾವತಿಸಿದರೆ ಶೇ. 5% ವಿನಾಯಿತಿ ಮಹಿಳಾ ಸಿಬ್ಬಂದಿಗೆ ಮಾನಸಿಕ ಕಿರುಕುಳ ಪ್ರಕರಣ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ… ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ನೋಡಿ

ಇತ್ತೀಚಿನ ಸುದ್ದಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಎಂ ಫ್ರೆಂಡ್ಸ್ ನ ಕಾರುಣ್ಯ ಯೋಜನೆಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಾಥ್

January 17, 2021, 7:07 PM

ಮಂಗಳೂರು(reporterkarnataka news): ಅತ್ಯಂತ ಬಡ ಮತ್ತು ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟದಿಂದ ಸರಕಾರಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅವರ ಜತೆಗಾರರಿಗೆ ಊಟದ ಖರ್ಚು ಮತ್ತಷ್ಟು ಹೊರೆ. ಇಂಥ ಸಂದರ್ಭದಲ್ಲಿ ಅವರಿಗೆ ನಿರಂತರ ಉಚಿತ ಊಟ ಕೊಡುತ್ತಿರುವ ಎಂ ಫ್ರೆಂಡ್ಸ್ ನ ಕಾರ್ಯಕ್ರಮ ಅತ್ಯಂತ ಪುಣ್ಯದಾಯಕ. ಇದಕ್ಕೆ ಸರ್ವರ ಸಹಕಾರ ಅಗತ್ಯ ಎಂದು ಮೇಯರ್ ದಿವಾಕರ ಪಾಂಡೇಶ್ವರ ಹೇಳಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಗಳ ಜತೆ ಇರುವವರಿಗೆ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ಉಚಿತ ಊಟ ನೀಡುವ ಕಾರುಣ್ಯ ಯೋಜನೆಗೆ ಪ್ರತಿ ವರ್ಷದಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ನೀಡುವ ಒಂದು ತಿಂಗಳಿನ ಪ್ರಾಯೋಜಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, ಒಕ್ಕೂಟ ಪ್ರತಿವರ್ಷ ಹಲವಾರು ಸೇವಾ ಕಾರ್ಯಕ್ರಮ ಆಯೋಜಿಸುತ್ತಿದೆ. ಆ ಪೈಕಿ ಕಾರುಣ್ಯಕ್ಕೆ ನೆರವು ನೀಡುವುದು ವಿಶಿಷ್ಟ ವಾದುದು.ಜಾತಿ, ಧರ್ಮದ ಭೇದವಿಲ್ಲದೆ ಕ್ಲಪ್ತ ಸಮಯಕ್ಕೆ ಶಿಸ್ತಿನಿಂದ ಗುಣಮಟ್ಟದ ಆಹಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ , ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಬಂಟರ ಸಂಘದ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಸಂದೇಶ್ ಶೆಟ್ಟಿ, ಕೊಲ್ಲಾಡಿ ಬಾಲಕೃಷ್ಣ ರೈ, ಎಂ ಫ್ರೆಂಡ್ಸ್‍ನ ಹಮೀದ್ ಅತ್ತೂರು, ಮುಹಮ್ಮದ್ ಕುಂಞ, ಝುಬೇರ್, ಹಾರಿಸ್ ಕಾನತ್ತಡ್ಕ, ಅಹ್ಮದ್ ಇರ್ಶಾದ್ ತುಂಬೆ, ಮುಹಮ್ಮದ್ ಆರಿಫ್ ಪಡುಬಿದ್ರಿ, ಸಾಮಾಜಿಕ ಕಾರ್ಯಕರ್ತ ತೇಜ್‍ಪಾಲ್ ಸುವರ್ಣ ಬೋಳಾ ಉಪಸ್ಥಿತರಿದ್ದರು.

ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು