ಇತ್ತೀಚಿನ ಸುದ್ದಿ
ನಟ ಶಿವರಾಜ್ ಕುಮಾರ್ ನೇತೃತ್ವದ ನಿಯೋಗದಿಂದ ಸಿಎಂ ಯಡಿಯೂರಪ್ಪ ಭೇಟಿ
September 9, 2020, 4:22 PM

ಬೆಂಗಳೂರು(reporterkarnataka news): ಕನ್ನಡ ಚಿತ್ರರಂಗ ಎದುರಿಸುತ್ತಿರುವ ಬಿಕ್ಕಟ್ಟನ್ನು ಪರಿಹರಿಸಲು ಸರ್ಕಾರ ನೆರವು ನೀಡಬೇಕು ಎಂದು ಚಿತ್ರ ಕಲಾವಿದರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಚಲನಚಿತ್ರ ರಂಗ ದಲ್ಲಿ ಚಟುವಟಿಕೆ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆಗಳ ಕುರಿತು ಸ್ಪಂದಿಸುವಂತೆ ನಟ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಸಿಎಂ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರನ್ನು ಭೇಟಿ ಮಾಡಿದ ನಿಯೋಗದ ಸದಸ್ಯರು ಕನ್ನಡ ಚಿತ್ರರಂಗದ ಬಿಕ್ಕಟ್ಟಿನ ಕುರಿತು ಮಾಹಿತಿ ನೀಡಿದರು.
ಚಿತ್ರಮಂದಿರಗಳು ಬಾಗಿಲು ಮುಚ್ಚಿವೆ. ಇದರಿಂದ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ನಿಯೋಗ ಮುಖ್ಯಮಂತ್ರಿ ಅವರ ಗಮನ ಸೆಳೆಯಿತು