ಇತ್ತೀಚಿನ ಸುದ್ದಿ
ಬಿ.ಎಸ್.ವೈ. ಕೊರೊನಾದಿಂದ ಮುಕ್ತ: ನಾಳೆ ಡಿಸ್ಚಾರ್ಜ್
August 10, 2020, 4:55 AM

ಬೆಂಗಳೂರು(reporter Karnataka)
ಕೊರೋನಾ ಪಾಸಿಟಿವ್ ಕಂಡುಬಂದಿದ್ದರಿಂದ ಕಳೆದ ಭಾನುವಾರ ರಾತ್ರಿ ಕೊರೋನಾ ಪಾಸಿಟಿವ್ನಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಸ್ಪತ್ರೆಗೆ ದಾಖಲಾಗಿದ್ದರು. ಇಂದಿನ ವೈದ್ಯಕೀಯ ಪರೀಕ್ಷೆಯಲ್ಲಿ ಕೊರೋನಾ ನೆಗೆಟಿವ್ ಬಂದಿದೆ. ಹೀಗಾಗಿ, ನಾಳೆ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಕೊರೋನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿ.ಎಸ್. ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಇಂದಿನ ಕೊರೋನಾ ಪರೀಕ್ಷೆಯಲ್ಲಿ ಸಿಎಂ ವರದಿ ನೆಗೆಟಿವ್ ಬಂದಿರುವುದರಿಂದ ಯಡಿಯೂರಪ್ಪ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಎಲ್ಲವೂ ಕ್ಲಿಯರ್ ಆಗಿದೆ ಎಂದು ವೈದ್ಯರು ಸಿಎಂ ಯಡಿಯೂರಪ್ಪ ಹಾಗೂ ಪುತ್ರಿ ಪದ್ಮಾಗೆ ತಿಳಿಸಿದ್ದಾರೆ. ಅವರು ಕಳೆದ 9 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
.