ಇತ್ತೀಚಿನ ಸುದ್ದಿ
ಯಡಿಯೂರಪ್ಪ ಸಂಪುಟ ವಿಸ್ತರಣೆ: ಇಂದು ನೂತನ ಸಚಿವರ ಪ್ರಮಾಣ ವಚನ; ಯಾರಿಗೆಲ್ಲ ಮಂತ್ರಿ ಯೋಗ?
January 13, 2021, 9:43 AM

ಬೆಂಗಳೂರು(reporterkarnataka news): ರಾಜ್ಯದ ನೂತನ ಸಚಿವರ ಪ್ರಮಾಣವಚನ ಸಮಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಬುಧವಾರ ಸಂಜೆ 4 ಗಂಟೆಗೆ ಸಮಾರಂಭ ನಡೆಯಲಿದೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಈ ಮಾಹಿತಿ ನೀಡಿದ್ದಾರೆ. ನೂತನ ಸಚಿವರ ಪಟ್ಟಿಯನ್ನು ಇಂದು ಬಿಡುಗಡೆ ಮಾಡುವ ನಿರೀಕ್ಷೆಯಿದೆ.
ಈ ಮಧ್ಯೆ ಅಬಕಾರಿ ಸಚಿವ ನಾಗೇಶ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ನಾಗೇಶ್ ಅವರಿಗೆ ಕೊಕ್ ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.