10:45 PM Friday4 - December 2020
ಬ್ರೇಕಿಂಗ್ ನ್ಯೂಸ್
ಮತ್ತೆ ನರ್ತಿಸಲಿದೆ ಕದ್ರಿ ಸಂಗೀತ ಕಾರಂಜಿ: ಶನಿವಾರ,  ಭಾನುವಾರ ಸಾರ್ವಜನಿಕ ವೀಕ್ಷಣೆಗೆ ಅವಕಾಶ ಕದ್ರಿ –… ದಿಲ್ಲಿಯಲ್ಲಿ ರೈತರ ಮೇಲಿನ ದೌರ್ಜನ್ಯ ಖಂಡಿಸಿ  ಶ್ರೀನಿವಾಸಪುರದಲ್ಲಿ ರಸ್ತೆ ತಡೆದು ಪ್ರತಿಭಟನೆ ಮಾಜಿ ಮೇಯರ್, ಕಾಂಗ್ರೆಸ್ ಹಿರಿಯ ನಾಯಕ, ಸಜ್ಜನ ರಾಜಕಾರಣಿ ಕೆ.ಕೆ. ಮೆಂಡನ್ ಇನ್ನಿಲ್ಲ ದೇಶದ ಜನರಿಗೆ ಶೀಘ್ರವೇ ಕೊರೊನಾ ಲಸಿಕೆ ಸಿದ್ಧ:  ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ… ಕನಕ ದಾಸರ ಸಂದೇಶ ಸಮಾಜದ ಕಣ್ಣು ತೆರೆಸುವಂತಿದೆ: ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅನಾಥ ಮಕ್ಕಳ್ಳನ್ನು ಸ್ವಂತ ಮಕ್ಕಳಂತೆ ಕಾಣುವ ಮೂಲಕ ಉತ್ತಮ ಭವಿಷ್ಯ ರೂಪಿಸಿ: ಡಾ.ಶಾಂತ ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕ: ಕುರುಬರ ಅಧ್ಯಕ್ಷ ಎಂ.ವೇಮಣ್ಣ  ಹಿಂಸಾಚಾರ: ಶಿವಮೊಗ್ಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿ, ಬಿಗಿ ಬಂದೋಬಸ್ತ್  ಮಾರಕ ಕೊರೊನಾಕ್ಕೆ ಒಂದೇ ದಿನ 540 ಮಂದಿ ಬಲಿ: 42, 916 ಮಂದಿ… ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ: 30 ವಾರ್ಡ್ ಗಳಲ್ಲಿ ಬಿಜೆಪಿ ಮುನ್ನಡೆ

ಇತ್ತೀಚಿನ ಸುದ್ದಿ

ಯಡಿಯೂರಪ್ಪ ಸಂಪುಟ ವಿಸ್ತರಣೆ: ಮೂಲ ಬಿಜೆಪಿಗರಿಗೆಷ್ಟು? ವಲಸಿಗರಿಗೆಷ್ಟು? 

September 18, 2020, 7:31 PM

ಬೆಂಗಳೂರು(reporterkarnataka news):

ರಾಜ್ಯ ಸಚಿವ ಸಂಪುಟ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ವರಿಷ್ಠರ ಜತೆ ಮಾತುಕತೆ ನಡೆಸಿದ್ದಾರೆ. ಆದರೆ ಈ ಬಾರಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ? ಎನ್ನುವುದು ಇದುವರೆಗೆ ಸ್ಪಷ್ಟವಾಗಿಲ್ಲ.

ಸಂಪುಟ ಪುನಾರಚನೆ ಮಾತು ಕೇಳಿ  ಬರುತ್ತಿರುವ ಹಿನ್ನೆಲೆಯಲ್ಲಿ ಕೆಲವು ಹಾಲಿ ಸಚಿವರಲ್ಲಿ ಈಗಾಗಲೇ ನಡುಕ ಶುರುವಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗುವಷ್ಟರಲ್ಲಿ ಅಧಿಕಾರ ತ್ಯಜಿಸಬೇಕಾ ಎಂಬ ಚಿಂತೆ ಅವರನ್ನು ಕಾಡಲಾರಂಭಿಸಿದೆ. 

ಆದರೆ ಸದ್ಯದ ಮಾಹಿತಿ ಪ್ರಕಾರ ವಿಸ್ತರಣೆ ಸಾಧ್ಯತೆಯೇ ಜಾಸ್ತಿ ಎನ್ನಲಾಗಿದೆ. ನಾಲ್ಕು ಮಂದಿ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಇಬ್ಬರು ಮೂಲ ಬಿಜೆಪಿಗರು, ಇಬ್ಬರು ವಲಸಿಗರಿಗೆ ಮಣೆ ಹಾಕುವ ಬಗ್ಗೆ ಕೇಳಿಬರುತ್ತಿದೆ.

ಇದನ್ನು ಹೊರತುಪಡಿಸಿ ಸಂಪುಟ ಪುನಾರಚನೆಗೆ ಯಡಿಯೂರಪ್ಪ ಕೈ ಹಾಕಿದರೆ ಕೆಲವು ಹಾಲಿ ಸಚಿವರು ಸ್ಥಾನ ಕಳೆದುಕೊಳ್ಳಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರ ಹೆಸರು ಕೂಡ ಈ ಪಟ್ಟಿಯಲ್ಲಿದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು