ಇತ್ತೀಚಿನ ಸುದ್ದಿ
ಹಿರಿಯ ಯಕ್ಷಗಾನ ಕಲಾವಿದ ಲಕ್ಷ್ಮಣ್ ಕಾಂಚನ್ ನಿಧನ
October 19, 2020, 10:46 AM

ಉಡುಪಿ(Reporter Karnataka News)
ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಲಕ್ಷ್ಮಣ ಕಾಂಚನ್, ಬಾರ್ಕೂರು(70) ಅವರು ಸೋಮವಾರ ಮುಂಜಾನೆ ನಿಧನರಾಗಿದ್ದಾರೆ.
ವಿವಿಧ ಮೇಳಗಳಲ್ಲಿ ನಾಲ್ಕು ದಶಕಕ್ಕೂ ಮಿಕ್ಕಿ ಸೇವೆ ಸಲ್ಲಿಸಿದ ಇವರು ಮೂರು ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗ ಪ್ರಶಸ್ತಿಯನ್ನು ಸ್ಚೀಕರಿಸಿದ್ದರು.
ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮಣ್ ಕಾಂಚನ್ ಅವರಿಗೆ ಸಹಾಯ ಹಸ್ತ ಚಾಚಿದ್ದ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾಂಚನರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರಿಗೆ ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ.