6:51 AM Saturday23 - January 2021
ಬ್ರೇಕಿಂಗ್ ನ್ಯೂಸ್
ಕಾಳ ಸಂತೆಯಲ್ಲಿ ಆಹಾರ ದಾಸ್ತಾನು ಹೆಚ್ಚಾಗುವ ಭೀತಿಯಿದೆ: ಮಾಜಿ ಸಚಿವ ಯು.ಟಿ ಖಾದರ್ ಅರ್ನಾಬ್ ಗೋಸ್ವಾಮಿ ವಾಟ್ಸಾಪ್ ಚಾಟ್ ಬಗ್ಗೆ ಕೇಂದ್ರ ಯಾಕೆ ಮಾತನಾಡುತ್ತಿಲ್ಲ: ಸೋನಿಯಾ ಪ್ರಶ್ನೆ  ಒತ್ತಡ ರಾಜಕೀಯಕ್ಕೆ ಮಣಿದು ಖಾತೆ ಮರು ಹಂಚಿಕೆ  ಮಾಡಿದ ಮುಖ್ಯಮಂತ್ರಿ ಬಿಎಸ್ ವೈ ಶಿವಮೊಗ್ಗದಲ್ಲಿ ನಡೆದದ್ದು ಭೂ ಕಂಪನವಲ್ಲ, ರೈಲ್ವೆ ಕ್ರಷರ್ ಸ್ಫೋಟ: 10ಕ್ಕೂ ಅಧಿಕ ಸಾವು… ಸಾಲು ಮರದ ತಿಮ್ಮಕ್ಕ ವೃಕ್ಷೋದ್ಯಾನವನ ಇಂದು ಸುಬ್ರಹ್ಮಣ್ಯದಲ್ಲಿ ಉದ್ಘಾಟನೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು ರಾಜ್ಯ ಧಾರ್ಮಿಕ ಪರಿಷತ್ ವಿಶೇಷ… ಶಿವಮೊಗ್ಗ, ಭದ್ರಾವತಿ, ಚಿಕ್ಕಮಗಳೂರಿನಲ್ಲಿ ಭೂ ಕಂಪನದ ಅನುಭವ: ಮನೆಯಿಂದ ಬೀದಿಗೆ ಓಡಿದ ಜನರು ಮಂಗಳೂರಿನಲ್ಲಿ  ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ 5ನೇ ಪುಣ್ಯತಿಥಿ ಆಚರಣೆ ಮಡಿಕೇರಿ ತಾಲೂಕು ಅಕ್ರಮ- ಸಕ್ರಮ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ವಿಲೇವಾರಿ  … ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಸಿಕ್ಕಿತು ಜಾಮೀನು: 140 ದಿನಗಳ ಬಳಿಕ ಬಿಡುಗಡೆ…

ಇತ್ತೀಚಿನ ಸುದ್ದಿ

ಯಕ್ಷಗಾನ ದೇವ ಪರಂಪರೆಯ ಮೂಲ ಕಲೆಯಾಗಿದ್ದು ಅಧ್ಯಯನ ಅಗತ್ಯ: ನಿತ್ಯಾನಂದ 

November 27, 2020, 11:17 PM

ಪಾವಂಜೆ (reporterkarnataka news): ಯಕ್ಷಗಾನ ದೇವ ಪರಂಪರೆಯ ಮೂಲ ಕಲೆ ಸೆಲೆಯಾಗಿದೆ. ಯಕ್ಷಗಾನದ ಅಧ್ಯಯನದ ಉತ್ತಮ ಅವಕಾಶಗಳನ್ನು ಬಳಸಿಕೊಳ್ಳುವ ಜಾಣ್ಮೆ ನಮ್ಮದಾಗಬೇಕು ಎಂದು ಚಿಕ್ಕಮಗಳೂರಿನ ವೇದವಿಜ್ಞಾನ ಮಂದಿರದ ವೇದ ಕೃಷಿಕ ಕೆ.ಎಸ್.ನಿತ್ಯಾನಂದ ಹೇಳಿದರು.

ಪಾವಂಜೆಯ ನಾಗವೃಜ ಕ್ಷೇತ್ರದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಳದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆಯ ನೂತನ ಯಕ್ಷಗಾನ ಮೇಳವನ್ನು ಶುಕ್ರವಾರ ಉದ್ಘಾಟಿಸಿ ಆಶೀರ್ವಚನ ನೀಡಿ ಮಾತನಾಡಿದರು. 

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪಟ್ಲ ಸತೀಶ್ ಶೆಟ್ಟಿ ಅವರು ಪಟ್ಲ ಫೌಂಡೇಶನ್‌ನ ಮೂಲಕ ಕಲಾವಿದರಿಗೆ ಸದಾ ನೆರಳಾಗಿ, ಕಲಾವಿದನಿಂದ ಯಜಮಾನನ ಜವಾಬ್ದಾರಿ ವಹಿಸಿ ಎಲ್ಲರಿಗೂ ಪ್ರೇರಕರಾಗಿದ್ದಾರೆ. ಯಕ್ಷಗಾನ ಕಲೆಯ ನಿತ್ಯ ಆರಾಧನೆ ನಿರಂತರವಾಗಿರಲಿ ಎಂದರು. 

ದೇವಳದ ಆಡಳಿತ ಮೊಕ್ತೇಸರ ಎಂ. ಶಶೀಂದ್ರ ಕುಮಾರ್ ಗಣ್ಯರನ್ನು ಹಾಗೂ ದಾನಿಗಳನ್ನು  ಗೌರವಿಸಿದರು. 

ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮೂಲ್ಕಿ ಸೀಮೆಯ ಅರಸರಾದ ಎಂ.ದುಗ್ಗಣ್ಣ ಸಾವಂತರು, ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸೀತಾರಾಮ ರೈ, ಸವಣೂರು, ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ದ.ಕ. ಜಿ.ಪಂ. ಸದಸ್ಯ ವಿನೋದ್‌ಕುಮಾರ್ ಬೊಳ್ಳೂರು, ತಾ.ಪಂ. ಸದಸ್ಯ ಜೀವನ್‌ಪ್ರಕಾಶ್ ಕಾಮೆರೊಟ್ಟು, ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ  ಡಾ. ಎಂ. ಮೋಹನ್ ಆಳ್ವ, ಮುಂಬೈನ ಭವಾನಿ ಶಿಪ್ಪಿಂಗ್ಸ್ ಸರ್ವಿಸಸ್‌ನ ಕೆ.ಡಿ.ಶೆಟ್ಟಿ, ಗುಜರಾತ್‌ನ ಬರೋಡಾ ತುಳು ಕೂಟದ ಅಧ್ಯಕ್ಷ ಶಶಿಧರ ಶೆಟ್ಟಿ,  ಯುಎಸ್‌ಎ ನ್ಯೂಜೆರ್ಸಿ ಪುತ್ತಿಗೆ ಮಠದ ವಿದ್ವಾನ್ ಯೋಗೀಂದ್ರ ಭಟ್, ಪಾವಂಜೆ ಶ್ರೀ ಮಹಾಲಿಂಗೇಶ್ವರ ದೇವಳದ  ಅರ್ಚಕ ಮೂಡುಮನೆ ಗಣೇಶ್ ಭಟ್, ಶ್ರೀ ಕ್ಷೇತ್ರ ವಗೆನಾಡುವಿನ ಆಡಳಿತ ಮೊಕ್ತೇಸರ ಮುಗುಳಿ ತಿರುಮಲ್ವೇಶ್ವರ ಭಟ್, ವರ್ಧಮಾನ ದುರ್ಗಾಪ್ರಸಾದ್ ಶೆಟ್ಟಿ ಗಡಿಕಾರರು  ಗೋಳಿದಡಿ ಗುತ್ತು ಗುರುಪುರ, ಉದ್ಯಮಿ ಮುನಿಯಾಲು ಉದಯಕುಮಾರ್ ಶೆಟ್ಟಿ, ತಡಂಬೈಲು ಶ್ರೀ ಸದಾಶಿವ ಗಣೇಶ್ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಯಸ್. ವಿ. ಮಯ್ಯ, ಕಲಾ ಪೋಷಕ ಶ್ರೀಪತಿ  ಭಟ್  ಮೂಡಬಿದ್ರೆ,  ಸಿ ಎ  ಸುದೇಶ್ ರೈ ಮಂಗಳೂರು, ಸಿ ಎ  ದಿವಾಕರ್ ರಾವ್ ಬೆಂಗಳೂರು, ಪಂಚಮೇಳಗಳ ಸಂಚಾಲಕ ಕಿಶನ್ ಹೆಗ್ಡೆ, ಶಾಂತಾರಾಮ ಶೆಟ್ಟಿ ಪಂಜಗುತ್ತು, ಮಹಾಬಲ ಶೆಟ್ಟಿ ಪಟ್ಲಗುತ್ತು, ಯಾದವ ಕೋಟ್ಯಾನ್  ಪೆರ್ಮುದೆ, ಶ್ರೀ ಗಣೇಶ್‌ಪುರ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಧರ್ಮೇಂದ್ರ, ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್‌ನ ಅಧ್ಯಕ್ಷ ಬಿ.ಸೂರ್ಯಕುಮಾರ್,  ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್, ಅಧ್ಯಕ್ಷರು  ಹಳೆಯಂಗಡಿ ದೇವಾಡಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಮದಾಸ್ ಪಾವಂಜೆ,  ಹಳೆಯಂಗಡಿ ವಿಠೋಭ ಭಜನಾ ಮಂಡಳಿಯ ಅಧ್ಯಕ್ಷ ಡಾ.ಶಿವಾನಂದ ಪ್ರಭು,  ರಾಮ ಟಿ. ಕಾಂಚನ್ ಪಾವಂಜೆ,  ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಮಾಜಿ ಅಧ್ಯಕ್ಷ ಪಿತಾಂಬರ ಶೆಟ್ಟಿಗಾರ್,  ಸಸಿಹಿತ್ಲು ಶ್ರೀ ಭಗವತೀ  ದೇವಸ್ಥಾನದ ಅಧ್ಯಕ್ಷ ವಾಮನ ಇಡ್ಯಾ, ಮಜಿಲ ಫ್ರೇಂಡ್ಸ್‌ನ ಅಶೋಕ್, ಉದ್ಯಮಿ ಜೋಕಿಂ ಕೊರೆಯ, ಭುಜಬಲಿ ಧರ್ಮಸ್ಥಳ  ಮತ್ತಿತರರು ಉಪಸ್ಥಿತರಿದ್ದರು.

ಅಡ್ಯಾರು ಪುರುಷೋತ್ತಮ ಭಂಡಾರಿ ಸ್ವಾಗತಿಸಿದರು, ಮೇಳದ ಭಾಗವತರು ಹಾಗೂ ಸಂಚಾಲಕ ಪಟ್ಲ ಸತೀಶ್ ಶೆಟ್ಟಿ ಪ್ರಸ್ತಾವನೆಗೈದರು. ಕರ್ನಾಟಕ ಯಕ್ಷಗಾನ ಮಂಡಳಿಯ ಸದಸ್ಯ ಕದ್ರಿ ನವನೀತ್ ಶೆಟ್ಟಿ ನಿರೂಪಿಸಿದರು. 

ಧರ್ಮದರ್ಶಿ ಡಾ. ಯಾಜಿ ನಿರಂಜನ್ ಭಟ್ ಮೇಳದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. 

ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿಯ ದೇವಳದಿಂದ ಚೌಕಿಗೆ ದಾನಿಗಳು ನೀಡಿದ ಸುವಸ್ತುಗಳ ಸಹಿತ ಭವ್ಯ ಮೆರವಣಿಗೆ ನಡೆಯಿತು. ಪ್ರಥಮ ಸೇವಾ ಬಯಲಾಟವಾಗಿ ಪಾಂಡವಾಶ್ವಮೇಧ ಕಥಾನಕ ಪ್ರದರ್ಶನಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು