1:19 PM Tuesday26 - January 2021
ಬ್ರೇಕಿಂಗ್ ನ್ಯೂಸ್
ಎಸ್‌ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ರೈತ ಐಕ್ಯತಾ ಸಂಗಮ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ: ಕುಟುಂಬದ ಸಮಸ್ಯೆ ಕಾರಣ? ಮಂಗಳೂರಿನ ನರ್ಸಿಂಗ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ: ಪಾಲಕರಲ್ಲಿ ಮತ್ತೆ ಭೀತಿ… ಗಣರಾಜ್ಯೋತ್ಸವ ಪರೇಡ್ ಗೆ ಆಯ್ಕೆಯಾದ ಕರ್ನಾಟಕದ ಟ್ಲಾಬ್ಲೊದಲ್ಲಿ ಕನ್ನಡ ಧ್ವಜ ನಾಪತ್ತೆ ಕಟೀಲು ಮೇಳ ಸೇವೆ ಆಟಗಳು:  ಇಂದು ಎಲ್ಲೆಲ್ಲಿ?  ನೀವೇ ನೋಡಿ ಬಡವರನ್ನು ಬೀದಿ ಪಾಲು ಮಾಡಿದರೆ ಜೋಕೆ: ಪಾಲಿಕೆಗೆ ಇಂಟಕ್ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್… ವಿ.ವಿ ಕಾಲೇಜಿನಲ್ಲಿ ಪ್ರೌಢ ಶಾಲಾ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಿಗೆ ರಾಜ್ಯ ಮಟ್ಟದ ಕಾರ್ಯಾಗಾರ ಬಲ್ಯ ಸಮೀಪ ಕಾರು- ಬೊಲೆರೋ ಅಪಘಾತ:  ಒಬ್ಬ ಸಾವು, 4 ಮಂದಿ ತೀವ್ರ… ಕಾಸರಗೋಡು: ಮೆಡಿಕಲ್ ಶಾಪ್ ಗೆ ಔಷಧ ಖರೀದಿಸಲು ಬಂದ ವ್ಯಕ್ತಿಯನ್ನು ಗುಂಪೊಂದು ಥಳಿಸಿ… ಕಾಳು ಹಾಕಿ ಕೋಳಿ ಕದಿಯುವ ಭಿಕ್ಷುಕರಿದ್ದಾರೆ ಎಚ್ಚರಿಕೆ: ನಿಮ್ಮ ಮನೆಗೂ ಬಂದಾರು ಜೋಕೆ!…

ಇತ್ತೀಚಿನ ಸುದ್ದಿ

ಯಾವುದೇ ಶಿಕ್ಷೆಗೆ ಸಿದ್ದ: ಕ್ಷಮೆಯಾಚನೆಗೆ  ಹಿರಿಯ ವಕೀಲ ಪ್ರಶಾಂತ್ ಭೂಷಣ್ ನಕಾರ

August 20, 2020, 12:36 PM

ನವದೆಹಲಿ(reporterkarnataka news): ನ್ಯಾಯಾಂಗ ನಿಂದನೆ ಆರೋಪಕ್ಕೆ ಗುರಿಯಾಗಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್ ತಮ್ಮ  ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳಲು ನಿರಾಕರಿಸಿದ್ದಾರೆ. ಪ್ರಜೆಯಾಗಿ ನಾನು ನನ್ನ ಕರ್ತವ್ಯ ನಿರ್ವಹಿಸಿದ್ದೇನೆ. ಯಾವುದೇ ಶಿಕ್ಷೆ ನೀಡಿದರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ. 

ಈ ಸಂಬಂಧ ವಿವಾದಾಸ್ಪದ ಟ್ವೀಟ್ ಗೆ ಸರ್ವೋಚ್ಚ ನ್ಯಾಯಾಲಯದ ಕ್ಷಮೆ ಕೋರಲು ನಿರಾಕರಿಸಿದ್ದಾರೆ. 

ಪ್ರಶಾಂತ್ ಭೂಷಣ್ ಮಾಡಿದ ಟ್ವೀಟನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ ಈ ಸಂಬಂಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿತ್ತು. ನ್ಯಾಯಮೂರ್ತಿ ಗಳಾದ ಅರುಣ್ ಮಿಶ್ರಾ, ಬಿ. ಆರ್. ಗವಾಯಿ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ಪೀಠ ಈ ಕುರಿತು ವಿಚಾರಣೆ ನಡೆಸಿತು. ಅಟಾರ್ನಿ ಜನರಲ್ ಕೆ. ಕೆ. ವೇಣುಗೋಪಾಲ್ ಕೂಡ ಪ್ರಶಾಂತ್ ಭೂಷಣ್ ಅವರಿಗೆ ಶಿಕ್ಷೆ ನೀಡದಂತೆ ನ್ಯಾಯಾಲಯಕ್ಕೆ  ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು