ಇತ್ತೀಚಿನ ಸುದ್ದಿ
ರೈತರ ಹಿತರಕ್ಷಣೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೇನು?
September 28, 2020, 1:30 PM

ಬೆಂಗಳೂರು(reporterkarnataka news): ರೈತನ ಮಗನಾಗಿ ನಾನು ರೈತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದ ಕುರ್ಚಿಗೆ ಅಂಟಿಕೊಂಡು ಕುಳಿತುಕೊಳ್ಳುವ ಗುಣ ನನ್ನದ್ದಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರದ ಕ್ರಮಗಳಿಂದ ರೈತರಿಗೆ ಒಳ್ಳೆಯದಾಗಲಿದೆ. ಅವರ ಆದಾಯ ಹೆಚ್ಚಾಗಲಿದೆ ಎಂದು ಯಡಿಯೂರಪ್ಪ ಹೇಳಿದರು. ರೈತರು ತಪ್ಪು ಮಾಹಿತಿಯಿಂದ ಹೋರಾಟದ ಹಾದಿ ತುಳಿಯದಂತೆ ಅವರು ಮನವಿ ಮಾಡಿದರು.
ಇದೇ ವೇಳೆ ಬಿಎಸ್ ವೈ ನೇತೃತ್ವದ ಸರ್ಕಾರವನ್ನು ರೈತರು ಕಿತ್ತೊಗೆಯಲಿದ್ದಾರೆ ಎಂದು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ