ಇತ್ತೀಚಿನ ಸುದ್ದಿ
ಪ್ರವಾಹ ಪರಿಸ್ಥಿತಿ: ಇಂದು ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ, 4000 ಕೋಟಿ ನಷ್ಟ ಅಂದಾಜು
August 25, 2020, 2:37 AM

ಬೆಂಗಳೂರು(reporterkarnataka news): ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳ ಪ್ರವಾಹ ಸ್ಥಿತಿ ಕುರಿತು ಅವರು ಇಂದು ವೈಮಾನಿಕ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್ ಮುಖ್ಯಮಂತ್ರಿಗೆ ಸಾಥ್ ನೀಡಲಿದ್ದಾರೆ.
ರಾಜ್ಯದಲ್ಲಿ ಭೀಕರ ಪ್ರವಾಹದಿಂದ 4000 ಕೋಟಿ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಉತ್ತರ ಕರ್ನಾಟಕದ ಹೆಚ್ಚಿನ ಜಿಲ್ಲೆಗಳು ಕೃಷ್ಣಾ, ಘಟ ಪ್ರಭಾ ಮತ್ತು ಮಲ ಪ್ರಭಾ ನದಿಗಳ ಅಬ್ಬರಕ್ಕೆ ನಲುಗಿ ಹೋಗಿವೆ