ಇತ್ತೀಚಿನ ಸುದ್ದಿ
ಹತ್ರಾಸ್ ಅತ್ಯಾಚಾರ ಪ್ರಕರಣ: ಯೋಗಿ ಸರ್ಕಾರ ವಜಾಕ್ಕೆ ಸಿದ್ದರಾಮಯ್ಯ ಆಗ್ರಹ
September 30, 2020, 11:50 AM

ಬೆಂಗಳೂರು(reporterkarnataka news): ಉತ್ತರಪ್ರದೇಶದ ಹತ್ರಾಸ್ ನಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ವಜಾ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯೋಗಿ ಸರ್ಕಾರದ ಜತೆ ಜತೆಗೆ ಅವರಿಗೆ ಬೆಂಬಲ ನೀಡುತ್ತಿರುವ ಕೇಂದ್ರ ಸರ್ಕಾರ ಕೂಡ ಇದರ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಶಿಸ್ತು ಪರಿಸ್ಥಿತಿ ಕುಸಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಜಾ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.