ಇತ್ತೀಚಿನ ಸುದ್ದಿ
ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐ ವಶದಲ್ಲಿ ವಿನಯ ಕುಲಕರ್ಣಿ
November 5, 2020, 8:20 AM

ಧಾರವಾಡ(reporterkarnataka news): ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ತೆಗೆದುಕೊಂಡಿದೆ. ಯೋಗಿಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆ ನಡೆದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಇದೀಗ ವಿನಯ ಕುಲಕರ್ಣಿಯನ್ನು ವಶಕ್ಕೆ ತೆಗೆದುಕೊಂಡಿದೆ.
ಧಾರವಾಡದ ಕಲ್ಯಾಣ ನಗರದಲ್ಲಿರುವ ಕುಲಕರ್ಣಿ ಅವರ ಮನೆಗೆ ಬಂದ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿಯನ್ನು ತಮ್ಮ ಜತೆ ಕರೆದುಕೊಂಡು ಹೋಗಿದ್ದಾರೆ.
ಯೋಗಿಶ್ ಗೌಡ ಬಿಜೆಪಿ ನಾಯಕರಾಗಿದ್ದರು. ಆರಂಭದಿಂದಲೂ ಈ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಹೆಸರು ಕೇಳಿ ಬಂದಿತ್ತು.