11:51 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್…

ಇತ್ತೀಚಿನ ಸುದ್ದಿ

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ

13/09/2024, 22:18

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಅಧಿಕಾರರೂಢ ಕೈ ಪಾಳಯದ
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಪೈಪೋಟಿ ಏರ್ಪಟ್ಟಿದೆ. ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಎಚ್.ಎಸ್‌. ಮಂಜುನಾಥ್ ಗೌಡ ಮತ್ತು ಯುವ ಕಾಂಗ್ರೆಸ್‌ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ರಾಜ್ಯದಾದ್ಯಂತ ಯುವ ಕಾಂಗ್ರೆಸ್‌ ಸದಸ್ಯತ್ವ ಅಭಿಯಾನ ಆಗಸ್ಟ್‌ 20ರಂದು ಆರಂಭವಾಗಿದೆ. ಈ ಅಭಿಯಾನ ಸೆ. 20ರ ವರೆಗೆ ನಡೆಯಲಿದೆ. ಸದಸ್ಯತ್ವ ನೋಂದಣಿಯ ಜೊತೆಗೆ ನೂತನ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಈ ಬಾರಿ ಅಧ್ಯಕ್ಷ ಸ್ಥಾನಕ್ಕಿಂತಲೂ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನ ತೀವ್ರ ಕುತೂಹಲ ಮೂಡಿಸಿದೆ. 35 ಸ್ಥಾನದ ಈ ಹುದ್ದೆಗೆ 101 ಜನ ಅಭ್ಯರ್ಥಿಗಳು ಕಣಕ್ಕಿಳಿದಿದ್ದು 6 ಅಭ್ಯರ್ಥಿಗಳು ಮಾಜಿ ಶಾಸಕರು ಹಾಗೂ ಸಚಿವರ ಪುತ್ರರು. ಕಳೆದ ಎರಡು ಬಾರಿ ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರೆಯಾಗಿದ್ದರೂ ಈ ಬಾರಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸುರೈಯ್ಯ ಅಂಜುಮ್ ಕಣಕ್ಕಿಳಿದಿದ್ದಾರೆ. ರಾಜ್ಯಾದ್ಯಂತ ಅತಿ ಹೆಚ್ಚಾಗಿ ಇವರ ಹೆಸರು ಕೇಳಿ ಬಂದಿದೆ. ಒಟ್ಟಿನಲ್ಲಿ ಒಂದು ಕಾಲದಲ್ಲಿ ಕೇವಲ ಪುರುಷರೆ ಅತಿ ಹೆಚ್ಚಾಗಿ ಇರುತ್ತಿದ್ದ ಯುವ ಕಾಂಗ್ರೆಸ್ ನಲ್ಲಿ ಈ ಬಾರಿ ಮಹಿಳೆಯರು ಪುರುಷ ಅಭ್ಯರ್ಥಿಗಳಿಗೆ ಫೈಟ್ ನೀಡುತ್ತಿದ್ದಾರೆ. ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಮೂಡಿದ ಆಸಕ್ತಿ ಎಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪ್ಲಸ್ ಆಗಲಿದೆಯೇ ಎನ್ನುವುದು ಡಾಲರ್ ಪ್ರಶ್ನೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು