ಇತ್ತೀಚಿನ ಸುದ್ದಿ
ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಪ್ರಕರಣ: ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಗೆ ಕೇರಳ ಅರ್ಜಿ
September 12, 2020, 5:58 AM

ತಿರುವನಂತಪುರಂ(reporterkarnataka news): ಕಾಸರಗೋಡು ಸಮೀಪದ ಪೆರಿಯ ಕಲ್ಲೋಟು ಎಂಬಲ್ಲಿ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಬರ್ಬರ ಹತ್ಯೆ ಪ್ರಕರಣದ ಸಿಬಿಐ ತನಿಖೆಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ತನಿಖೆ ಸ್ಥಗಿತಗೊಳಿಸಬೇಕು ಎಂದು ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ.
ಕೇರಳ ಹೈಕೋರ್ಟ್ ನ ಏಕ ಸದಸ್ಯ ಪೀಠ ಮೊದಲು ಈ ಪ್ರಕರಣದ ಸಿಬಿಐ ತನಿಖೆಗೆ ಆದೇಶ ನೀಡಿತ್ತು. ಬಳಿಕ ವಿಭಾಗೀಯ ಪೀಠದಲ್ಲಿ ರಾಜ್ಯ ಸರ್ಕಾರ ಇದನ್ನು ಪ್ರಶ್ನಿಸಿತ್ತು. ವಿಭಾಗೀಯ ಪೀಠ ಕೂಡ ಸಿಬಿಐ ತನಿಖೆಗೆ ಸಮ್ಮತಿ ಸೂಚಿಸಿತ್ತು. ಇದರಿಂದ ಹಿನ್ನೆಡೆ ಅನುಭವಿಸಿದ ರಾಜ್ಯ ಸರ್ಕಾರ ಇದೀಗ ಸುಪ್ರೀಂ ಕೋರ್ಟಿನ ಕದ ತಟ್ಟಿದೆ.
ಪಕ್ಷದ ಕೆಲವು ಸ್ಥಳೀಯ ನಾಯಕರನ್ನು ರಕ್ಷಿಸುವ ಸಂಬಂಧ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಿರೋಧ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.