ಇತ್ತೀಚಿನ ಸುದ್ದಿ
ಶಾಸಕ ಜಮೀರ್ ಅಹ್ಮದ್ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕೋವಿಡ್ ಪಾಸಿಟಿವ್
August 18, 2020, 12:22 PM

ಬೆಂಗಳೂರು(Reporter Karnataka News)
ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ 19 ರಾಜಕಾರಣಿಗಳ ನಡುವಿನ ಸವಾರಿಯನ್ನು ಮುಂದುವರಿಸಿದ್ದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಈ ಕುರಿತು ತನ್ನ ಅಧಿಕೃತ ಟ್ವಿಟರ್ ಖಾತೆಯ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಅದೇ ರೀತಿ ಹಿರಿಯೂರು ಕ್ಷೇತ್ರದ ಶಾಸಕಿಯಾಗಿರುವ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೂ ಕೊರೊನಾ ಸೋಂಕು ತಗುಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.