3:41 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ: ಆ.17ರಂದು ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತ

16/08/2024, 22:19

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನಾಳೆ ( ಆ.17 ಶನಿವಾರ ) ಹೊರ ರೋಗಿಗಳ ಸೇವೆಯನ್ನು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಸ್ಥಗಿತಗೊಳಿಸಿರುವುದಾಗಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಗಣೇಶ್ ಭಟ್ ತಿಳಿಸಿದ್ದಾರೆ.
ಕೋಲ್ಕತ್ತಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ಈ ಕಾರಣದಿಂದ ಭಾರತೀಯ ವೈದ್ಯಕೀಯ ಸಂಘ ಕರ್ನಾಟಕ ರಾಜ್ಯ ಶಾಖೆ ಕೂಡ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದು ಹಾಗಾಗಿ ತೀರ್ಥಹಳ್ಳಿಯ ತಾಲೂಕು ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸೇವೆ ಸ್ಥಗಿತ ಮಾಡಲಾಗಿದೆ.
ಅತ್ಯಂತ ಅವಶ್ಯಕತೆ ಇರುವಂತಹ ತುರ್ತು ಚಿಕಿತ್ಸಾ ವಿಭಾಗ, ಹೆರಿಗೆ ವಿಭಾಗ, ತುರ್ತು ಶಸ್ತ್ರ ಚಿಕಿತ್ಸೆ ಇದ್ದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಡಾ. ಗಣೇಶ್ ಭಟ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು