10:03 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ಮೂಡಿಗೆರೆ ಅರಣ್ಯ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ: ಕಾಟಿ ಶಿಕಾರಿ ಪ್ರಕರಣದಲ್ಲಿ 6 ಮಂದಿ ಬಂಧನ

08/11/2025, 09:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಕಾಡು ಪ್ರದೇಶದಲ್ಲಿ ಸದ್ದಿಲ್ಲದೆ ನಡೆಯುತ್ತಿದ್ದ ಕಾಟಿ (ಕಾಡುಕೋಣ) ಶಿಕಾರಿ ಹಾಗೂ ಮಾಂಸ ಸರಬರಾಜು ಜಾಲವನ್ನು ಮೂಡಿಗೆರೆ ಅರಣ್ಯ ಅಧಿಕಾರಿಗಳು ಭೇದಿಸಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಶುಕ್ರವಾರ ರಾತ್ರಿ ಉಪ ವಲಯ ಅರಣ್ಯಾಧಿಕಾರಿ ಸುಹಾಸ್ ಅವರ ನೇತೃತ್ವದ ತಂಡವು ದಾಳಿ ನಡೆಸಿ, ಬಾಳೂರು ಹೊರಟ್ಟಿ ಗ್ರಾಮದ ಮಂಜಯ್ಯ ಮನೆಗೆ ತೆರಳಿ ಅಲ್ಲಿ ಬೇಯಿಸುತ್ತಿದ್ದ ಕಾಟಿ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಸ್ಥಳದಲ್ಲಿದ್ದ ಮಂಜಯ್ಯನನ್ನು ವಿಚಾರಿಸಿದ ವೇಳೆ, ಅವರು ನೀಡಿದ ಮಾಹಿತಿಯ ಮೇರೆಗೆ ಕಲ್ಮನೆ ಕಾಫಿ ತೋಟದಲ್ಲಿ ಕಾಟಿ ಶಿಕಾರಿ ನಡೆದಿರುವುದು ಬಹಿರಂಗವಾಗಿದೆ. ಶಿಕಾರಿಯಲ್ಲಿ ತೋಟದ ಮ್ಯಾನೇಜರ್ ರವೀಶ್ ಬಿ.ಎಸ್. ಮತ್ತು ಬಾಳೆಹೊನ್ನೂರಿನ ಜೀವನ್ ಪ್ರಮುಖ ಪಾತ್ರವಹಿಸಿದ್ದರೆಂದು ತಿಳಿದುಬಂದಿದೆ. ಜೀವನ್ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ.
ಮಾಂಸವನ್ನು ಶುದ್ಧಗೊಳಿಸಿ ಹಂಚಿಕೊಂಡಿರುವ ನೀಡುವಳೆ ಗ್ರಾಮದ ಸೀನ, ಸುಂದರ್ ಮತ್ತು ಮಂಜಯ್ಯ ಸೇರಿದಂತೆ ಒಟ್ಟು 6 ಮಂದಿಯನ್ನು ಬಂಧಿಸಲಾಗಿದೆ. ಶಿಕಾರಿ ಮಾಂಸವನ್ನು ತಿಂದ ತೋಟದ ಮಾಲೀಕ ಧೀರಜ್ ಪ್ರಭು ಸೇರಿದಂತೆ ಮೂವರು ಆರೋಪಿಗಳು ಪರಾರಿಯಾಗಿದ್ದು, ಅವರ ಬಂಧನಕ್ಕಾಗಿ ಅಧಿಕಾರಿಗಳು ಶೋಧ ಮುಂದುವರೆಸಿದ್ದಾರೆ.
ಮಾಂಸ ಸರಬರಾಜಿನಲ್ಲಿ ಭಾಗಿಯಾಗಿದ್ದ ದೇಜಪ್ಪ ಮತ್ತು ಪ್ರದೀಪ್ ಅವರನ್ನು ಸಹ ಬಂಧಿಸಲಾಗಿದೆ.
ಒಟ್ಟು 6 ಆರೋಪಿಗಳನ್ನು ಬಂಧಿಸಿ, ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಶಿಕಾರಿ, ಮಾಂಸ ಸರಬರಾಜು ಮತ್ತು ಕಳ್ಳಸಾಗಣೆ ಆರೋಪಗಳಡಿ ಪ್ರಕರಣ ದಾಖಲಿಸಲಾಗಿದೆ. ಬಂಧಿತ ಆರೋಪಿಗಳನ್ನು ತಡರಾತ್ರಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆಕರ್ಷ ಅವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಮಂಜುನಾಥ, ಉಪ ವಲಯ ಅರಣ್ಯಾಧಿಕಾರಿ ಸುಹಾಸ್, ಹಾಗೂ ಅರಣ್ಯ ರಕ್ಷಕರು ಲಕ್ಷ್ಮಣ್, ರಘು, ಉಮೇಶ್ ಮತ್ತು ವಾಹನ ಚಾಲಕ ಸುಮಂತ್ ಅವರ ತಂಡ ಯಶಸ್ವಿಯಾಗಿ ನಡೆಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳ್ಳ ಬೇಟೆ ಪ್ರಕರಣಗಳು ನಿರಂತರವಾಗುತ್ತಿದ್ದು, ಈ ಘಟನೆ ಮತ್ತೊಮ್ಮೆ ಅರಣ್ಯ ಇಲಾಖೆ ಮುಂದೆ ಹೊಸ ಸವಾಲು ಎಬ್ಬಿಸಿದೆ. ಜಿಲ್ಲೆಯಾದ್ಯಂತ ಬಂದೂಕು ಪರವಾನಿಗೆಗೆ ಸಾವಿರಾರು ಮಂದಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಕಳ್ಳ ಬೇಟೆ ಪ್ರಕರಣಗಳು ಇನ್ನಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು