1:35 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮೈಸೂರು ನಗರದಲ್ಲಿ ಫ್ಲೈ‌ಓವರ್ ನಿರ್ಮಾಣಕ್ಕೆ ಮುಂದಾದ ರಾಜ್ಯ ಸರ್ಕಾರ: ಸಂಸದ ಯದುವೀರ್ ವಿರೋಧ

07/11/2025, 08:56

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ರಾಜ್ಯ ಸರ್ಕಾರ ಮೈಸೂರು ನಗರದಲ್ಲಿ ಎರಡು ಫ್ಲೈ ಓವರ್ ನಿರ್ಮಾಣಕ್ಕೆ ಮುಂದಾಗಿದ್ದು, ಇದಕ್ಕೆ ಸಂಸದ ಯದುವೀರ ಕೃಷ್ಣದತ್ತ ‌ಚಾಮರಾಜ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ದಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ. ಸಿಎಂ ಕೂಡ ಗ್ರೇಟ‌ರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ಫೈಓವರ್‌ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗೌಂಡ್ ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ. ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ. ಜನರ ವಿರೋಧದ ನಡುವೆ ಫೈ ಓವ‌ರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಜೊತೆಗೆ ಜನರ ಸಹಕಾರದೊಂದಿಗೆ ಹೋರಾಟ ರೂಪಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು