ಇತ್ತೀಚಿನ ಸುದ್ದಿ
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ
06/11/2025, 11:06
ಸಿ ಅಂಡ್ ಡಿ ಜಾಗದ ಸಮಸ್ಯೆ ಬಗ್ಗೆ ರೈತರು ನಡೆಸುತ್ತಿರುವ ಹೋರಾಟದ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಭೇಟಿಯಾಗಿ ಸಿ ಅಂಡ್ ಡಿ. ವಿಚಾರವಾಗಿ ಹಾಗೂ ಇದರಿಂದಾಗಿ ಜಿಲ್ಲೆಯ ರೈತರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ಸಮಿತಿಯೊಂದರನ್ನು ರಚಿಸಲಾಗುವುದೆಂದು ಭರವಸೆ ನೀಡಿದರು.
ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com












