8:03 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ಅಪಘಾತ ವಿಮೆ: ಸಚಿವ ಈಶ್ವರ ಖಂಡ್ರೆ

25/10/2025, 15:46

ಹೊರಗುತ್ತಿಗೆ ಮುಂಚೂಣಿ ಸಿಬ್ಬಂದಿಗೆ 20 ಲಕ್ಷ ವಿಮೆ

ಬೆಂಗಳೂರು(reporterkarnataka.com): ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ 20 ಲಕ್ಷ ವಿಮಾ ಸೌಲಭ್ಯ ಕಲ್ಪಿಸಲು ಬ್ಯಾಂಕ್ ಆಫ್ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವನ ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ಮುಂಚೂಣಿ ಸಿಬ್ಬಂದಿಗಳು/ ಹಸಿರು ಸೈನಿಕರು ಅಪಾಯ ಎದಿಸುತ್ತಾ ಹಗಲಿರುಳು ಶ್ರಮಿಸುತ್ತಿದ್ದು, ಇಲಾಖೆ ಕೆಲವು ಶೌರ್ಯಶಾಲಿ ಹಸಿರು ಯೋಧರನ್ನು ಕಳೆದುಕೊಂಡಿದೆ. ಇವರೆಲ್ಲರಿಗೂ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ಈ ತಿಳಿವಳಿಕೆ ಒಬ್ಬಂದ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದ್ದಾರೆ.
ವನ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಮುಂಚೂಣಿ ಹೊರಗುತ್ತಿಗೆ ಸಿಬ್ಬಂಯ ಪಾತ್ರವೂ ಮಹತ್ವದ್ದಾಗಿದೆ. ಹೀಗಾಗಿ ಹೊರಗುತ್ತಿಗೆ ಸಿಬ್ಬಂದಿಗೂ 20 ಲಕ್ಷಗಳ ರೂ. ವಿಮೆ ಸೌಲಭ್ಯ ಕಲ್ಪಿಸಲಾಗಿದೆ. ಅರಣ್ಯ ಇಲಾಖೆಯ ಎಲ್ಲಾ ಖಾಯಂ ಉದ್ಯೋಗಿಗಳಿಗೆ, ಅವರ ವೇತನ ಮತ್ತು ಶ್ರೇಣಿಯ ಹೊರತಾಗಿ ಎಲ್ಲರಿಗೂ 1 ಕೋಟಿ ರೂ.ಗಳ ಅಪಘಾತ ಮರಣ ವಿಮೆಯನ್ನು ಬ್ಯಾಂಕ್ ನೀಡುತ್ತದೆ. ಒಂದೊಮ್ಮೆ ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಹೆಚ್ಚುವರಿಯಾಗಿ 25 ಲಕ್ಷ ರೂ.ಗಳನ್ನು ಬ್ಯಾಂಕ್ ಪಾವತಿಸಲಿದೆ ಎಂದು ತಿಳಿಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾದಲ್ಲಿ ಇಲಾಖೆಯ ನೌಕರರು ಪಿಂಚಣಿ ಖಾತೆಯನ್ನು ಮುಂದುವರಿಸಿದರೆ, ಈ ವೈಯಕ್ತಿಕ ಅಪಘಾತ ವಿಮಾ ರಕ್ಷಣೆಯ ಸೌಲಭ್ಯ 70 ವರ್ಷ ವಯಸ್ಸಿನವರೆಗೆ ಮುಂದುವರಿಯುತ್ತದೆ. ಇದಲ್ಲದೆ, ಖಾಯಂ ಉದ್ಯೋಗಿಗಳಿಗೆ ರೂ.10.00 ಲಕ್ಷಗಳ ಜೀವ ವಿಮಾ ರಕ್ಷಣೆಯನ್ನು ಸಹ ಬ್ಯಾಂಕ್ ಒದಗಿಸುತ್ತದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆಯ ನೌಕರರು ಮತ್ತು ಅವರ ಕುಟುಂಬಗಳ ಹಿತದೃಷ್ಟಿಯಿಂದ ಕರ್ನಾಟಕ ಅರಣ್ಯ ಇಲಾಖೆಯು ಬ್ಯಾಂಕ್‌ ಆಫ್‌ ಬರೋಡಾದೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಂಡಿದ್ದು, ಹಲವು ವಿಶೇಷ ಸವಲತ್ತುಗಳೂ ಲಭಿಸಲಿವೆ. ಈ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವಂತೆ ಮತ್ತು ಬಿಓಬಿಯಲ್ಲಿ ಸಂಬಳ ಖಾತೆ ತೆರೆಯಲು ಸೂಚಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು