8:07 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

1 ವರ್ಷದೊಳಗೆ ನಕ್ಸಲ್ ಹಿಂಸಾಚಾರಕ್ಕೆ ಸಂಪೂರ್ಣ ಕಡಿವಾಣ: ಸಿಎಂಗಳ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿಶ್ ಶಾ

27/09/2021, 12:56

ಹೊಸದಿಲ್ಲಿ(reporterkarnataka.com): ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದ್ದು,ಅದನ್ನು ಕೊನೆಗೊಳಿಸಲು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಮಾವೋವಾದಿ ಬಂಡುಕೋರ ಗುಂಪುಗಳಿಗೆ ಹಣದ ಹರಿವನ್ನು ತಡೆಗಟ್ಟಲು ಜಂಟಿ ಕಾರ್ಯತಂತ್ರ ರೂಪಿಸಬೇಕು ಎಂದು ಒಡಿಶಾ, ತೆಲಂಗಾಣ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಮುಖ್ಯಮಂತ್ರಿಗಳ ಸಭೆಯಲ್ಲಿ ಅವರು ಹೇಳಿದರು.

ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದೆ. ಎಡಪಂಥೀಯ ಉಗ್ರಗಾಮಿ ಹಿಂಸಾಚಾರದ ಸಾವಿನ ಸಂಖ್ಯೆ ಒಂದು ವರ್ಷದಲ್ಲಿ 200 ಕ್ಕೆ ಇಳಿದಿದೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಿನ ವರ್ಷಕ್ಕೆ ಎಲ್ಲ ಮುಖ್ಯಮಂತ್ರಿಗಳು ಈ ಸಮಸ್ಯೆಯನ್ನು ಆದ್ಯತೆಯ ಮೇಲೆ ತೆಗೆದುಕೊಳ್ಳಬೇಕೆಂದು ಅವರು ಸೂಚಿಸಿದರು.

ಸಭೆಯಲ್ಲಿ ಮುಖ್ಯಮಂತ್ರಿಗಳಾದ ನವೀನ್ ಪಟ್ನಾಯಕ್ (ಒಡಿಶಾ), ಕೆ. ಚಂದ್ರಶೇಖರ್ ರಾವ್(ತೆಲಂಗಾಣ), ನಿತೀಶ್ ಕುಮಾರ್(ಬಿಹಾರ), ಶಿವರಾಜ್ ಸಿಂಗ್ ಚೌಹಾಣ್(ಮಧ್ಯ ಪ್ರದೇಶ), ಉದ್ಧವ್ ಠಾಕ್ರೆ(ಮಹಾರಾಷ್ಟ್ರ) ಮತ್ತು ಹೇಮಂತ್ ಸೊರೆನ್(ಜಾರ್ಖಂಡ್) ಭಾಗವಹಿಸಿದ್ದರು. ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಗಿರಿರಾಜ್ ಸಿಂಗ್, ಅರ್ಜುನ್ ಮುಂಡಾ ಮತ್ತು ನಿತ್ಯಾನಂದ ರೈ ಸಹ ಇದ್ದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸಭೆಯಲ್ಲಿ ಭಾಗವಹಿಸಲಿಲ್ಲ. ಈ ರಾಜ್ಯಗಳನ್ನು ಸಚಿವರು ಅಥವಾ ಹಿರಿಯ ಅಧಿಕಾರಿಗಳು ಪ್ರತಿನಿಧಿಸಿದ್ದರು
ಮಾವೋವಾದಿ ಗುಂಪುಗಳ ವಿರುದ್ಧದ ಹೋರಾಟ ಈಗ ಅಂತಿಮ ಹಂತದಲ್ಲಿದ್ದು,ಅದನ್ನು ಕೊನೆಗೊಳಿಸಲು ನಿರ್ಣಾಯಕ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.2009 ರಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 2,258 ರಿಂದ 2020 ರಲ್ಲಿ 665 ಕ್ಕೆ ಮಾವೋವಾದಿಗಳ ಹಿಂಸಾಚಾರದ ಘಟನೆಗಳು ಶೇಕಡ 70 ರಷ್ಟು ಕಡಿಮೆಯಾಗಿದೆ. ಮಾವೋವಾದಿಗಳ ಪ್ರಭಾವದಲ್ಲಿರುವ ಪ್ರದೇಶಗಳು 2010 ರಲ್ಲಿ 96 ಜಿಲ್ಲೆಗಳಿದ್ದವು. ಭೌಗೋಳಿಕ ಹರಡುವಿಕೆ 2020 ರಲ್ಲಿ ಕೇವಲ 53ಕ್ಕೆ ಇಳಿದಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವವನ್ನು ಪ್ರತಿ ಹಂತಕ್ಕೂ ಹರಡಲು ಮತ್ತು ಅಭಿವೃದ್ಧಿಯಾಗದ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಮಾವೋವಾದಿ ದಂಗೆಯನ್ನು ನಿರ್ಮೂಲನೆ ಮಾಡುವುದು ಅಗತ್ಯ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು