5:16 AM Monday12 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

10 ಗ್ರಾಮಗಳ ರೈತರಿಂದ ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ: ಸರಕಾರದ ವಿರುದ್ಧ ರೈತರ ಆಕ್ರೋಶಕ್ಕೆ ಕಾರಣವಾದರೂ ಏನು?

12/01/2022, 21:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಭದ್ರಾ ಬಫರ್ ಝೋನ್ ಜಾರಿಗೆ ವಿರೋಧಿಸಿರುವ ರೈತರು ಸಾಮೂಹಿಕ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬಫರ್ ಝೋನ್ ಕುರಿತಂತೆ ಎನ್.ಆರ್.ಪುರ ತಾಲೂಕಿನ ರೈತರು ಸಾಮೂಹಿಕ ಪತ್ರ ಬರೆದಿದ್ದಾರೆ.

ಸಾಲೂರು, ಹೆನ್ನಂಗಿ, ಬೆಳ್ಳಂಗಿ, ಅಳೆಹಳ್ಳಿ, ಆಡುವಳ್ಳಿ, ಕೊಳಲೆ, ಮುದುಗುಣಿ, ಬಾಳೆಗದ್ದೆ, ನಂದಿಗಾವೆ, ಬೈರಾಪುರ ಗ್ರಾಮಗಳು ಇದರಲ್ಲಿ ಸೇರಿವೆ. 10 ಗ್ರಾಮಗಳ ಜನರಿಂದ ಸಾಮೂಹಿಕ ದಯಾಮರಣಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.

ಈ ಹಿಂದೆಯೂ ಹಲವು ಯೋಜನೆಗಳ ಮೂಲಕ ಜನರನ್ನು ಸರಕಾರ ಒಕ್ಕಲೆಬ್ಬಿಸಿತ್ತು. ಇದೇ ಗ್ರಾಮದಲ್ಲಿ ಪುನರ್ ವಸತಿ ಕಲ್ಪಿಸಿತ್ತು. ಇದೀಗ

ಮತ್ತೆ ಒಕ್ಕಲೆಬ್ಬಿಸಲು ರೂಪಿಸಿದ ಬಫರ್ ಝೋನ್ ಜಾರಿಗೆ ತೀವ್ರ ವಿರೋಧ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು