5:57 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಆಚರಣೆ

08/08/2022, 22:06

ಮಂಗಳೂರು(reporterkarnataka.com): ಭವಿಷ್ಯದಲ್ಲಿ ಮಕ್ಕಳು ರೋಗಗಳಿಂದ ಮುಕ್ತರಾಗಿ ಆರೋಗ್ಯ ಪೂರ್ಣ ಜೀವನ ನಡೆಸಲು ಸಹಕಾರಿಯಾಗಲು ಇದೇ ಆ.10ರಂದು ರಾಷ್ಟ್ರೀಯ ಜಂತುಹುಳ ನಿವಾರಣಾ ದಿನವನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಹೇಳಿದರು.

ಅವರು ಸೋಮವಾರ ಡಿಎಚ್‍ಓ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಕ್ಕಳು ಸೇರಿದಂತೆ ಎಲ್ಲರಲ್ಲೂ ಜಂತು ಹುಳುವಿನ ಸಮಸ್ಯೆ ಸಾಮಾನ್ಯವಾಗಿರುತ್ತದೆ. ಜಂತು ಹುಳುಗಳು ಮನುಷ್ಯನ ಕರುಳಿನಿಂದ ಆಹಾರ ಪಡೆದು ಜೀವಿಸುವ ಉಪಜೀವಿಗಳು. ಬರಿಗಾಲಿನಲ್ಲಿ ಬಯಲಿನಲ್ಲಿ ತಿರುಗಾಡುವುದು, ಕೈ ತೊಳೆಯದೆ ಆಹಾರ ಸೇವಿಸುವುದು, ಬಯಲು ಮಲ ವಿಸರ್ಜನೆ, ಶೌಚದ ನಂತರ ಕೈ ತೊಳೆಯದಿರುವುದು, ತೊಳೆಯದ ಹಣ್ಣು, ಹಂಪಲು ಸೇವನೆ ಸೇರಿದಂತೆ ಇನ್ನಿತರ ಕಾರಣಗಳಿಂದ ಕ್ರಿಮಿಗಳು ಹೊಟ್ಟೆ ಸೇರಿ ಕರುಳಿನಲ್ಲಿ ಸಂತಾನೋತ್ಪತ್ತಿ ಮಾಡಿ ಜಂತು ಹುಳುವಿನ ಸಮಸ್ಯೆ ಎದುರಾಗುತ್ತದೆ, ಇದರಿಂದಾಗಿ ಹೊಟ್ಟೆ ನೋವು, ಭೇದಿ, ಹಸಿವಿಲ್ಲದಿರುವುದು, ಸುಸ್ತಾಗುವಂತಹ ಲಕ್ಷಣಗಳ ಜೊತೆಗೆ ಆಹಾರದ ಪೌಷ್ಟಿಕತೆ ದೇಹವನ್ನು ಸೇರದೆ ರಕ್ತ ಹೀನತೆಯುಂಟಾಗುತ್ತದೆ, ಇದರಿಂದ ಮಕ್ಕಳು ಶಾಲೆಗೆ ಸರಿಯಾಗಿ ಹೋಗಲಾಗದೆ ಶಿಕ್ಷಣ ಕುಂಠಿತವಾಗುವ ಸಂಭವವು ಇರುತ್ತದೆ ಎಂಬ ಮಾಹಿತಿ ನೀಡಿದರು.

ಆದ ಕಾರಣ ಜಂತುಹುಳ ಬಾಧೆಯಿಂದ ಮಕ್ಕಳನ್ನು ರಕ್ಷಿಸಲು ಆಗಸ್ಟ್ 10ರ ಬುಧವಾರ ನಗರದ ಮಣ್ಣಗುಡ್ಡೆಯ ಸರ್ಕಾರಿ ಶಾಲೆಯಲ್ಲಿ ರಾಷ್ಟ್ರೀಯ ಜಂತುಹುಳ ನಿವಾರಣಾ ದಿನ ಆಚರಿಸಲಾಗುತ್ತಿದೆ. ಆ ಮೂಲಕ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳ 1 ರಿಂದ 19 ವರ್ಷದ ಸುಮಾರು ಐದು ಲಕ್ಷಕ್ಕಿಂತಲೂ ಹೆಚ್ಚು ಮಕ್ಕಳಿಗೆ 2022-23ನೇ ಸಾಲಿನ ಪ್ರಥಮ ಸುತ್ತಿನಲ್ಲಿ ಜಂತುಹುಳ ನಿವಾರಣಾ ಔಷಧಿಯಾದ ವಿಶ್ವ ಸಂಸ್ಥೆ ಪ್ರಮಾಣೀಕರಿಸಿದ ಅಲ್ಬೆಂಡಝೋಲ್ 400 ಮಿ.ಗ್ರಾಂ. ಮಾತ್ರೆ ಉಚಿತವಾಗಿ ವಿತರಿಸಲಾಗುತ್ತಿದೆ, ಅಂದು ಮಾತ್ರೆ ಪಡೆಯಲಾಗದ ಮಕ್ಕಳಿಗೆ ಆಗಸ್ಟ್ 17ರಂದು ವಿತರಿಸಲಾಗುವುದು. ಜೊತೆಗೆ ಶಾಲೆ ಅಥವಾ ಅಂಗನವಾಡಿಗಳಿಂದ ಹೊರಗುಳಿದ ಮಕ್ಕಳಿಗೆ ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ ಮತ್ತು ಕಿರಿಯ ಆರೋಗ್ಯ ಸಹಾಯಕಿಯರು  ಮನೆಗಳಿಗೆ ಭೇಟಿ ನೀಡಿ ವಿತರಿಸಲಿದ್ದಾರೆ ಎಂದವರು ಹೇಳಿದರು.

ಜಂತುಹುಳ ಮಾತ್ರೆಯು ಚೀಪುವ ಮಾತ್ರೆಯಾಗಿದ್ದು, 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಮಾತ್ರೆಯನ್ನು ಎದೆಹಾಲಿನಲ್ಲಿ ಬೆರೆಸಿ ನೀಡಬೇಕು. 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ 1 ಮಾತ್ರೆ ನೀಡಲಾಗುತ್ತದೆ ಹಾಗೂ ಪ್ರತೀ ಆರು ತಿಂಗಳಿಗೊಮ್ಮೆ ಈ ಮಾತ್ರೆಗಳನ್ನು ಸೇವಿಸಬಹುದಾಗಿದೆ ಎಂದರು.

ಜಂತುಹುಳ ಮಾತ್ರೆ ಸೇವನೆಯಿಂದ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ, ಪೌಷ್ಟಿಕತೆ ಸುಧಾರಿಸುತ್ತದೆ, ಏಕಾಗ್ರತೆ ಮತ್ತು ಕಲಿಕಾ ಸಾಮಥ್ರ್ಯ ಹೆಚ್ಚುತ್ತದೆ ಮತ್ತು ಬಹುಮುಖ್ಯವಾಗಿ ಜಂತುಹುಳ ಬಾಧೆ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದನ್ನು ತಪ್ಪಿಸಬಹುದು ಎಂದು ತಿಳಿಸಿದರು.


ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಬದ್ರುದ್ದೀನ್, ಡಾ. ರಾಜೇಶ್, ಡಾ. ಸುದರ್ಶನ್, ಡಾ. ಸುಜಯ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ., ಜಿಲ್ಲಾ ಶುಶ್ರೂಣಾಧಿಕಾರಿ ಲಿಸ್ಸಿ ಗೋಷ್ಠಿಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು