6:31 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

12/12/2025, 21:25

ನವದೆಹಲಿ(reporterkarnataka.com):vಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ “ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಸಜೆ” ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ ಕಾರಿದ್ದಾರೆ.
ಈ ಶಾಸನ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವುದಾಗಿದೆ ಮತ್ತು ರಾಜಕೀಯ ನಿಯಂತ್ರಣದ ದುರುದ್ದೇಶಕ್ಕಾಗಿ ಜಾರಿಗೆ ತಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಸಚಿವರು ಹರಿ ಹಾಯ್ದಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಈ ಮೂಲಕ ಸರ್ವರ ವಾಕ್ ಸ್ವತಂತ್ರ ಕಿತ್ತುಕೊಳ್ಳುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರದರ್ಶಿಸುತ್ತಿದ್ದು, ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿಯಾಗಿದೆ ಎಂದು ಜೋಶಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ ದುರಾಡಳಿತ ವಿರುದ್ಧದ ಧ್ವನಿ ಅಡಗಿಸಲು ಹಾಗು ಸಾರ್ವಜನಿಕ ಅಭಿಪ್ರಾಯಗಳಿಗೆ ಕಡಿವಾಣ ಹಾಕಲು ಹೀಗೆ “ದ್ವೇಷ ಭಾಷಣ”ಕ್ಕೆ 10 ವರ್ಷಗಳ ಜೈಲು ಶಿಕ್ಷೆ?” ಎಂಬ “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ” ಶಾಸನ ರಚನೆ ಮಾಡಿದೆ ಎಂದು ಖಂಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಈ ಶಾಸನ ದ್ವೇಷ ಭಾಷಣವನ್ನು ನಿಯಂತ್ರಿಸುವ ಉದ್ದೇಶವೋ ಅಥವಾ ವಾಕ್ ಸ್ವಾತಂತ್ರ್ಯವನ್ನೇ ಕಿತ್ತುಕೊಳ್ಳುವ ಹುನ್ನಾರವೋ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಇದು ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ರಚಿಸಿದಂತೆ ಕಾಣುತ್ತಿಲ್ಲ. ಬದಲಾಗಿ ಸರ್ಕಾರದ ದುರಾಡಳಿತ ಪ್ರಶ್ನಿಸುವವರ ಧ್ವನಿ ಅಡಗಿಸುವ ದುರುದ್ದೇಶಪುರಕದಂತೆ ಇದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರದ ಈ ವಿಧೇಯಕ ವಿಮರ್ಶಕರನ್ನು ವಿಮರ್ಶೆಯಿಂದಲೇ ದೂರವಿಡುವ ಹಾಗೂ ಸರ್ಕಾರದ ದುರಾಡಳಿತ ಹೊರಬಾರದಂತೆ ಹತ್ತಿಕ್ಕುವ ದುರಾಲೋಚನೆಯಿಂದ ಕೂಡಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು