11:43 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

100 ಕೋಟಿ ಜನರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ

21/10/2021, 23:00

ಮಂಗಳೂರು(reporterkarnataka.com): ಭಾರತದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಿ ದಾಖಲೆ ಸೃಷ್ಟಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವದಲ್ಲಿ ವೈದ್ಯಕೀಯ ರಂಗದಲ್ಲಿ ಬಹಳಷ್ಟು ಮುಂದುವರಿದಿರುವ ದೇಶಗಳಲ್ಲೂ ಆಗದಂತಹ ಸಾಧನೆಯನ್ನು ಭಾರತ ಮಾಡಿದೆ. ಇದಕ್ಕೆ ಕಾರಣ ಉತ್ತಮ ನಾಯಕತ್ವ ಮತ್ತು ವೈದ್ಯಕೀಯ ರಂಗದ ಸಿಬ್ಬಂದಿಗಳ ಅವಿರತ ಶ್ರಮ ಎಂದು ಹೇಳಿದ್ದಾರೆ.

ಕೋವಿಡ್ ನಿರ್ವಹಣೆಯಲ್ಲಿ ಯಶಸ್ಸು ಗಳಿಸಿದ ನಂತರ ಲಸಿಕೆ ವಿತರಣೆಯಲ್ಲಿ ಭಾರತವು 100 ಕೋಟಿ ಜನರಿಗೆ ಲಸಿಕೆ ನೀಡಿದ ಮೊದಲ ದೇಶವಾಗಿದೆ. ಲಸಿಕೆಯ ಕುರಿತು ಇಲ್ಲ‌ಸಲ್ಲದ ಆರೋಪ ಹೊರೆಸಿದವರಿಗೆ ಇದು ಉತ್ತರವಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು