5:43 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

10ನೇ ವರ್ಷದ ಸಂಭ್ರಮದಲ್ಲಿ ನಂಜನಗೂಡು ಕೃಷ್ಣ ಆಸ್ಪತ್ರೆ: ಏಪ್ರಿಲ್ 7ರಿಂದ ಮೇ 7ರ ವರೆಗೆ ಎಲ್ಲ ಶಸ್ತ್ರ ಚಿಕಿತ್ಸೆಗಳಿಗೂ ಶೇ. 40ರಷ್ಟು ರಿಯಾಯಿತಿ

06/04/2024, 19:48

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

1958 ರಲ್ಲಿ ನಂಜನಗೂಡಿನಲ್ಲಿ ಕೃಷ್ಣ ಕ್ಲಿನಿಕ್ ಎಂಬ ಹೆಸರಿನಲ್ಲಿ ಪ್ರಾರಂಭವಾಗಿ ಸುತ್ತಮುತ್ತಲಿನ ಜನರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿದ್ದು 2014ರಲ್ಲಿ ಮತ್ತಷ್ಟು ಉತ್ತಮ ಸ್ಪೆಷಾಲಿಟಿ ಯೊಂದಿಗೆ ನೂರು ಹಾಸಿಗೆಯ ಕೃಷ್ಣ ಆಸ್ಪತ್ರೆಯಾಗಿ ಪ್ರಾರಂಭಗೊಂಡು ಹತ್ತನೇ ವರ್ಷದ ಸಂಭ್ರಮಾಚರಣೆಯಲ್ಲಿದೆ ಎಂದು ಆಸ್ಪತ್ರೆಯ ಸಂಸ್ಥಾಪಕರಾದ ಡಾ. ಗೀತಾ ತಿಳಿಸಿದ್ದಾರೆ.
ಇಂದು ನಂಜನಗೂಡು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು
ಕಳೆದ ಹತ್ತು ವರ್ಷದಿಂದ ನಮ್ಮ ಆಸ್ಪತ್ರೆಯು ಅತ್ಯಂತ ಪ್ರಾಮಾಣಿಕವಾಗಿ ಬಡವರ ಹಾಗೂ ಮಧ್ಯಮ ವರ್ಗದವರಿಗೂ ಕೈಗೆಟುಕುವಂತಹ ಬೆಲೆಯಲ್ಲಿ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಾ ಬಂದಿದೆ. ಇದರ ಜೊತೆಗೆ ಕೊರೋನಾ ಸೇರಿದಂತೆ ಸರ್ಕಾರದ ಬಹುತೇಕ ಎಲ್ಲಾ ಉಚಿತ ವೈದ್ಯಕೀಯ ಯೋಜನೆಗಳನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸಿದೆ ಎಂದು ಆಸ್ಪತ್ರೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
10ನೇ ವರ್ಷದ ಸಂಭ್ರಮದ ಪ್ರಯುಕ್ತ ಏಪ್ರಿಲ್ 7 ರಿಂದ ಮೇ 7ರ ವರೆಗೆ ಒಂದು ತಿಂಗಳ ಕಾಲ ನಮ್ಮ ಆಸ್ಪತ್ರೆಯಲ್ಲಿ ನಡೆಯುವ ಎಲ್ಲಾ ಶಸ್ತ್ರ ಚಿಕಿತ್ಸೆ ಗಳಿಗೂ ಶೇಕಡ 40ರಷ್ಟು ರಿಯಾಯಿತಿ ನೀಡಲಾಗುತ್ತದೆ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಏಪ್ರಿಲ್ 7ರಂದು ಸಂಜೆ ಪಟ್ಟಣದ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ 10ನೇ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಅಲ್ಲದೆ ಮುಂದಿನ ದಿನಗಳಲ್ಲಿ ನಂಜನಗೂಡಿನ ಕೃಷ್ಣ ಆಸ್ಪತ್ರೆಯು ಮೈಸೂರಿನಲ್ಲಿ ಮತ್ತೊಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿ ಮತ್ತಷ್ಟು ಉತ್ತಮ ಹಾಗೂ ಗುಣಮಟ್ಟದ ಸೇವೆಗೆ ಮುಂದಾಗಲಿದೆ ಎಂದು ಈ ಸಂದರ್ಭ ತಿಳಿಸಿದರು.
ಆಸ್ಪತ್ರೆಯ ಆಡಳಿತಾಧಿಕಾರಿ ಪವನ್ ಕುಮಾರ್ ಹಾಗೂ ಸಿಬ್ಬಂದಿಗಳು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು