ಇತ್ತೀಚಿನ ಸುದ್ದಿ
ಆತ್ಮಶಕ್ತಿ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕ ಸಭೆ
12/06/2026, 21:47
ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು.
ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್, ಶ್ರೀ ಪುರುಷೋತ್ತಮ ಕೆ., ಶ್ರೀ ಗೋಪಾಲ್ ಯು.ಕೆ., ಹಾಗೂ ಶ್ರೀಮತಿ ದೇವಕಿ ಆರ್. ಉಳ್ಳಾಲ್ ಅವರುಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಘದ ಸದಸ್ಯರಾದ ಶ್ರೀ ವಿಜಯ್ ಕುಮಾರ್ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ಸಿಬ್ಬಂದಿಗಳ ನಗುಮುಖದ ಸೇವೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸಂಘವು ಇತರೆ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು.
ಸಂಘದ ಸದಸ್ಯರಾದ ಶ್ರೀ ಪುರುಷೋತ್ತಮ ಕೆ. ಅವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರವರ ನೇತೃತ್ವದಲ್ಲಿ ಹಮ್ಮಿಕೊಳ್ಳುತ್ತಿರುವ ಸಮಾಜ ಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದರು.
ಸಂಘದ ಸದಸ್ಯರಾದ ಶ್ರೀಮತಿ ದೇವಕಿ ಆರ್. ಉಳ್ಳಾಲ್ ಅವರು ಮಾತನಾಡಿ “ರಾಷ್ಟ್ರೀಕೃತ ಬ್ಯಾಂಕ್‌ನ ಸೇವೆಗಿಂತ ಸಹಕಾರಿ ಸಂಘದ ಸೇವೆಯು ವೇಗವಾಗಿರುತ್ತದೆ ಮತ್ತು ಸರಳತೆಯಿಂದ ಕೂಡಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಸದಸ್ಯರಾದ ಶ್ರೀ ಪುಷ್ಪರಾಜ್, ಶ್ರೀ ಯು. ಐತ್ತಪ್ಪ ಶೆಟ್ಟಿಗಾರ್ ಮತ್ತು ಶ್ರೀ ಮಾಧವ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರು ಮಾತನಾಡಿ “ಸಹಕಾರಿ ಸಂಘದ ಸದಸ್ಯರ ಸಹಕಾರದಿಂದಲೇ ನಾವು ಇಷ್ಟು ಯಶಸ್ಸು ಸಾಧಿಸಲು ಸಾಧ್ಯವಾಯಿತು. ಸಂಘದಲ್ಲಿ 95 ಶೇ. ಮಹಿಳಾ ಸಿಬ್ಬಂದಿಗಳೇ ಕಾರ್ಯನಿರ್ವಹಿಸುತ್ತಿದ್ದು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ. ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ.10 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ಜೀವ ವಿಮೆ, ವಾಹನ ವಿಮೆ, ಆರೋಗ್ಯ ವಿಮೆ ಸೇವಾ ಸೌಲಭ್ಯವನ್ನು ಸ್ಮರ್ಧಾತ್ಮಕ ಪ್ರೀಮಿಯಂನಲ್ಲಿ ನೀಡಲಾಗುತ್ತಿದೆ, ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಡಿ.ಸಿ ಆಪೀಸ್ ಶಾಖೆಯಲ್ಲಿ ವ್ಯವಹಾರದ ದಿನಗಳಲ್ಲಿ ಸಂಜೆ 7.00 ಗಂಟೆಯವರೆಗೆ ಇ-ಸ್ಟ್ಯಾಂಪ್ ಪೇಪರ್ ಸೇವೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿ ಗ್ರಾಹಕರು ಇದರ ಸದುಪಯೋಗಪಡೆಯುವಂತೆ ವಿನಂತಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಮ್. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ಪವಿತ್ರ ಯು. ಜೆ. ಅವರು ಸ್ವಾಗತಿಸಿ, ಹಿರಿಯ ಶಾಖಾಧಿಕಾರಿಯಾದ ಶ್ರೀ ಸಚಿನ್ ಅವರು ನಿರೂಪಿಸಿದರು.













