6:02 PM Saturday15 - March 2025
ಬ್ರೇಕಿಂಗ್ ನ್ಯೂಸ್
PWD Minister | ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಆಗಮನ-ನಿರ್ಗಮನ ಮಾರ್ಗ ಮುಚ್ಚಿಲ್ಲ:… Home Minister | ರಾಜ್ಯದ ಎಲ್ಲ ಪೊಲೀಸ್ ಸಿಬ್ಬಂದಿಗಳಿಗೆ ಸೈಬರ್ ತರಬೇತಿ: ಗೃಹ… Forest Minister | ಬೇಲೂರು ಬಳಿ ಕಾಡಾನೆ ದಾಳಿಗೆ ಮಹಿಳೆ ಸಾವು; 3… ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್.ವೆಂಕಟಾಚಲಯ್ಯ ಪ್ರತಿಪಾದನೆ ತೀರ್ಥಹಳ್ಳಿ: ಮಸೀದಿ ಬಳಿ ನಿಲ್ಲಿಸಿದ್ದ ವಾಹನ ಅಪಹರಿಸಿದ ಖದೀಮರು; 30 ಲಕ್ಷ ರೂ.… ವಿಧಾನ ಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಅಪಘಾತ: ದೂರವಾಣಿ ಕರೆ ಮಾಡಿ… VV Shutdown | ವಿವಿ ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಬಿಜೆಪಿಗೆ ಆತಂಕ… ಮಾತು ಉಳಿಸಿಕೊಂಡ ಸಿದ್ದರಾಮಯ್ಯ ಸರಕಾರ; ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ… ನಟ ಅನಂತನಾಗ್ ದಂಪತಿಯ ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ; ಮಾಜಿ ಡಿಸಿಎಂ… Ex CM | ಸ್ವಾತಿ ಹತ್ಯೆ ಹಿಂದೆ ಲವ್ ಜಿಹಾದ್ ಜಾಲ ಸಕ್ರೀಯ:…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜಪೆ ಶಾಖೆಯ 11ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

15/03/2025, 17:53

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಗೋಪಾಲ್ ಅಮೀನ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ರವರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಸಿಬ್ಬಂದಿಗಳ ಕೊರತೆ ಇರುವುದರಿಂದ ನಾವುಗಳು ಅಲ್ಲಿ ತೆರಳದೆ ಸಹಕಾರಿ ಸಂಸ್ಥೆಗಳತ್ತಾ ಆಕರ್ಷಿತರಾಗುತ್ತಿದ್ದೇವೆ. ಅದರಲ್ಲೂ ಆತ್ಮಶಕ್ತಿಯ ಸಿಬ್ಬಂದಿಗಳು ಎಟಿಎಂ ಗಿಂತಲೂ ಅತೀ ವೇಗದಲ್ಲಿ ಸೇವೆಯನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆತ್ಮಶಕ್ತಿಯ ಸಹಕಾರಿ ತನ್ನ ಸ್ವಂತ ಆಪ್ಲಿಕೇಶನ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ ಎಂದು ಶುಭ ಹಾರೈಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಬಜ್ಪೆ ಶಾಖೆಯು ಆರಂಭಗೊಂಡು 11 ವರ್ಷಗಳ ಈ ಸುಸಂಧರ್ಭದಲ್ಲಿ ಗ್ರಾಹಕರ ಸಭೆಯನ್ನು ಆಯೋಜಿಸಿದ್ದೇವೆ. 11ವರ್ಷಗಳಿಂದ ಎಲ್ಲಾ ವರ್ಗದ ಗ್ರಾಹಕರು ಸಹಕರಿಸುತ್ತಾ ಶಾಖೆಯು ಉತ್ತಮ ವ್ಯವಹಾರ ಸಾಧಿಸಲು ಕಾರಣೀಕರ್ತರಾಗಿದ್ದಾರೆ. ಸಂಘವು ಠೇವಣಿದಾರರ ಸುರಕ್ಷತೆ ದೃಷ್ಟಿಯಿಂದ ಭದ್ರತಾ ಸಾಲಗಳಿಗೆ ಹೆಚ್ಚು ಒತ್ತು ಕೊಟ್ಟು, ಚಿನ್ನಾಭರಣ ಸಾಲವನ್ನು ನೀಡಲು ಹೆಚ್ಚು ಪ್ರೋತ್ಸಾಹವನ್ನು ನೀಡುತ್ತಿದೆ. ಹಾಗೆಯೇ ಗ್ರಾಹಕರಿಗೆ ತಮ್ಮ ತುರ್ತು ಅಗತ್ಯತೆಗಳಿಗಾಗಿ ವೈಯಕ್ತಿಕ ಸಾಲವಾಗಿ ಸಣ್ಣ ಪ್ರಮಾಣದ ಮೈಕ್ರೋ ಸಾಲವನ್ನು ನೀಡಲಾಗುತ್ತಿದೆ. ಸರಕಾರ ಯಶಸ್ವಿನಿ ಯೋಜನೆಯ ನೋಂದಣಿಯು ಈ ತಿಂಗಳ ಅಂತ್ಯದವರೆಗೆ ಅಂದರೆ ಮಾರ್ಚ್ 31ರ ತನಕ ಲಭ್ಯವಿದ್ದು, ಸಂಘದ ಸದಸ್ಯರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ವಿನಂತಿಸಿದರು.
ಸಂಘದ ಸದಸ್ಯರಾದ ಗೋಪಾಲ್ ಅಮೀನ್, ಬಾಲಕೃಷ್ಣ ಸುವರ್ಣ, ರತ್ನಾಕರ್ ಬಿ. ಕೆ , ಹಾಗೂ ಹರೀಶ್, ವಿನೋದರ ಪೂಜಾರಿ ಇವರುಗಳು ಸಂಘದ ಕಾರ್ಯವ್ಯೆಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ನಿರ್ದೇಶಕರಾದ ಶ ರಮಾನಾಥ್ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದರು.
ಬಜ್ಪೆ ಶಾಖೆಯ ಸಿಬ್ಬಂದಿಯಾದ ಸ್ವಾತಿ ಸ್ವಾಗತಿಸಿದರು. ಅನುಜಿತ ವಂದಿಸಿದರು. ಶಾಖಾಧಿಕಾರಿ ರವಿಕಲಾ ಕಾರ್ಯಕಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು