5:28 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜಪೆ ಶಾಖೆಯ 11ನೇ ವಾರ್ಷಿಕೋತ್ಸವ, ಗ್ರಾಹಕರ ಸಭೆ

15/03/2025, 17:53

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಗೋಪಾಲ್ ಅಮೀನ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಪ್ರದೀಪ್ ಕುಮಾರ್ ಸುವರ್ಣ ರವರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಸಿಬ್ಬಂದಿಗಳ ಕೊರತೆ ಇರುವುದರಿಂದ ನಾವುಗಳು ಅಲ್ಲಿ ತೆರಳದೆ ಸಹಕಾರಿ ಸಂಸ್ಥೆಗಳತ್ತಾ ಆಕರ್ಷಿತರಾಗುತ್ತಿದ್ದೇವೆ. ಅದರಲ್ಲೂ ಆತ್ಮಶಕ್ತಿಯ ಸಿಬ್ಬಂದಿಗಳು ಎಟಿಎಂ ಗಿಂತಲೂ ಅತೀ ವೇಗದಲ್ಲಿ ಸೇವೆಯನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆತ್ಮಶಕ್ತಿಯ ಸಹಕಾರಿ ತನ್ನ ಸ್ವಂತ ಆಪ್ಲಿಕೇಶನ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ ಎಂದು ಶುಭ ಹಾರೈಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಬಜ್ಪೆ ಶಾಖೆಯು ಆರಂಭಗೊಂಡು 11 ವರ್ಷಗಳ ಈ ಸುಸಂಧರ್ಭದಲ್ಲಿ ಗ್ರಾಹಕರ ಸಭೆಯನ್ನು ಆಯೋಜಿಸಿದ್ದೇವೆ. 11ವರ್ಷಗಳಿಂದ ಎಲ್ಲಾ ವರ್ಗದ ಗ್ರಾಹಕರು ಸಹಕರಿಸುತ್ತಾ ಶಾಖೆಯು ಉತ್ತಮ ವ್ಯವಹಾರ ಸಾಧಿಸಲು ಕಾರಣೀಕರ್ತರಾಗಿದ್ದಾರೆ. ಸಂಘವು ಠೇವಣಿದಾರರ ಸುರಕ್ಷತೆ ದೃಷ್ಟಿಯಿಂದ ಭದ್ರತಾ ಸಾಲಗಳಿಗೆ ಹೆಚ್ಚು ಒತ್ತು ಕೊಟ್ಟು, ಚಿನ್ನಾಭರಣ ಸಾಲವನ್ನು ನೀಡಲು ಹೆಚ್ಚು ಪ್ರೋತ್ಸಾಹವನ್ನು ನೀಡುತ್ತಿದೆ. ಹಾಗೆಯೇ ಗ್ರಾಹಕರಿಗೆ ತಮ್ಮ ತುರ್ತು ಅಗತ್ಯತೆಗಳಿಗಾಗಿ ವೈಯಕ್ತಿಕ ಸಾಲವಾಗಿ ಸಣ್ಣ ಪ್ರಮಾಣದ ಮೈಕ್ರೋ ಸಾಲವನ್ನು ನೀಡಲಾಗುತ್ತಿದೆ. ಸರಕಾರ ಯಶಸ್ವಿನಿ ಯೋಜನೆಯ ನೋಂದಣಿಯು ಈ ತಿಂಗಳ ಅಂತ್ಯದವರೆಗೆ ಅಂದರೆ ಮಾರ್ಚ್ 31ರ ತನಕ ಲಭ್ಯವಿದ್ದು, ಸಂಘದ ಸದಸ್ಯರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ವಿನಂತಿಸಿದರು.
ಸಂಘದ ಸದಸ್ಯರಾದ ಗೋಪಾಲ್ ಅಮೀನ್, ಬಾಲಕೃಷ್ಣ ಸುವರ್ಣ, ರತ್ನಾಕರ್ ಬಿ. ಕೆ , ಹಾಗೂ ಹರೀಶ್, ವಿನೋದರ ಪೂಜಾರಿ ಇವರುಗಳು ಸಂಘದ ಕಾರ್ಯವ್ಯೆಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ನಿರ್ದೇಶಕರಾದ ಶ ರಮಾನಾಥ್ ಸನಿಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದರು.
ಬಜ್ಪೆ ಶಾಖೆಯ ಸಿಬ್ಬಂದಿಯಾದ ಸ್ವಾತಿ ಸ್ವಾಗತಿಸಿದರು. ಅನುಜಿತ ವಂದಿಸಿದರು. ಶಾಖಾಧಿಕಾರಿ ರವಿಕಲಾ ಕಾರ್ಯಕಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು