12:42 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕಟ್ಟಡ ಕಾರ್ಮಿಕರಿಗಾಗಿ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನ ಲೋಕಾರ್ಪಣೆ

11/03/2025, 17:03

*ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ: ಸಿ.ಎಂ.ಸಿದ್ದರಾಮಯ್ಯ*

ಬೆಂಗಳೂರು(reporterkarnataka.com): ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.


ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು.
ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದರು.
ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದು ಅವರು ನುಡಿದರು.
ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಘೋಷಿಸಿದರು.
ಇವೆಲ್ಲಾ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು