10:46 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಾಗನೂರು ರುದ್ರಾಕ್ಷಿಮಠದ ಡಾ.ಶಿವಬಸವ ಮಹಾಸ್ವಾಮಿಗಳ 136ನೇ ಜಯಂತಿ ಮಹೋತ್ಸವ; ತ್ರಿವಿಧ ದಾಸೋಹಗಳ ಮೂಲಕ ಜನ ಸಾಮಾನ್ಯರ ಸೇವೆ

09/12/2025, 09:20

ಬೆಳಗಾವಿ(reporterkarnataka.com): ಕರ್ನಾಟಕದ ಮಠಾದೀಶರು, ಮಠಗಳು ತ್ರಿವಿಧ ದಾಸೋಹಗಳನ್ನು ಆರಂಭಿಸುವ ಮೂಲಕ‌ ಸರ್ಕಾರಕ್ಕೆ ಸ್ಫೂರ್ತಿಯಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳಗಾವಿಯ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಡಾ.ಶಿವಬಸವ ಮಹಾಸ್ವಾಮಿಗಳವರ 136ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ನಾನು ಮೊದಲಿನಿಂದಲೂ ಮಠಾಧೀಶರನ್ನು ಆಶಿರ್ವಾದದಿಂದ ಬೆಳೆದಿರುವೆ, ಈ ಮಠಕ್ಕೂ ನಮ್ಮ ಮನೆತನಕ್ಕೂ ನೂರಾರು ವರ್ಷಗಳ ಸಂಬಂಧ ಇದೆ ಎಂದರು.


ಸರ್ಕಾರಕ್ಕೆ ಸಮಾನವಾಗಿ ಸಾಮಾಜಿಕ ಕೆಲಸ ಕಾರ್ಯಗಳನ್ನು ನಮ್ಮ ಶ್ರೀಮಠಗಳು ಮಾಡುತ್ತಿವೆ. ಅಕ್ಷರ ದಾಸೋಹ, ಅನ್ನ, ಆರೋಗ್ಯ ದಾಸೋಹ ಗಳನ್ನು ಸರ್ಕಾರ ಕಾಪಿ ಮಾಡುತ್ತಿವೆ. ಮಠಗಳ ಕೆಲಸವೇ ಸರ್ಕಾರಕ್ಕೆ ಸ್ಫೂರ್ತಿಯಾಗಿದೆ‌ ಎಂದು ನುಡಿದರು.
ನಾಗನೂರು ಮಠದ ಹಿರಿಯ ಶ್ರೀಗಳು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ಸಾಗುತ್ತಿದ್ದೇವೆ‌. ಕರ್ನಾಟಕ ಏಕೀಕರಣಕ್ಕೆ ಅವರ ಕೊಡುಗೆ ಅಪಾರ, ಸ್ವಾತಂತ್ರ್ಯ ಹೋರಾಟದಲ್ಲೂ ಅವರ ಶ್ರಮ ಸಾಕಷ್ಟಿದೆ. ಸಮಾಜದ ಮಗಳು ಎನ್ನುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸಮಾಜ ಯಾವ ಕಡೆಗೆ ಸಾಗುತ್ತಿದೆ ಎಂಬುದನ್ನು ನಾವು ನೋಡಬೇಕು. ಜಾತ್ಯಾತೀತ ನಿಲುವಿನ ಮೇಲೆ ನಾವು ನಿಲ್ಲಬೇಕು, ಧರ್ಮದಿಂದ ಜೀವನ ನಡೆಸಬೇಕು. ಆಧ್ಯಾತ್ಮಿಕ ಗುರುಗಳ ಚಿಂತನೆಗಳನ್ನು ನಾವು ಅಳವಡಿಸಿಕೊಳ್ಳಬೇಕು. ಮಠದ ಕೆಲಸ ಕಾರ್ಯಗಳಿಗೆ ಸದಾ ಬೆಂಬಲಿಸುವೆ, ಸರ್ಕಾರದ ವತಿಯಿಂದ ಯಾವುದೇ ಕೆಲಸಗಳಿದ್ದರೂ ಮಾಡಿಕೊಡುವೆ ಎಂದರು.
ಹೆಣ್ಣು ಮಕ್ಕಳಿಗೆ ಪ್ರೋತ್ಸಾಹಿಸುವ ಕೆಲಸವನ್ನು ಮಠಗಳು ಮಾಡುತ್ತಿದೆ. ಕಸದಲ್ಲೂ ರಸ ತೆಗೆಯುವ ಕೆಲಸವನ್ನು ಮಹಿಳೆಯರು ಮಾಡುತ್ತಾರೆ. ಹೆಣ್ಣು, ಗಂಡು ಎನ್ನುವ ಭೇದಭಾವ ಈಗ ಇಲ್ಲ ಎಂದು ನುಡಿದರು.
ಈ ವೇಳೆ ಗದಗದ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಪೂಜ್ಯಶ್ರೀ ಮನ್ನಿರಂಜನ ಡಾ.ತೋಂಟದ ಸಿದ್ದರಾಮ ಮಹಾಸ್ವಾಮಿಗಳು, ಧಾರವಾಡದ ಮುರುಘಾಮಠದ ಡಾ.ಮಲ್ಲಿಕಾರ್ಜುನ ‌ಮಹಾಸ್ವಾಮಿಗಳು, ಬೆಟ್ಟದಪುರದ ಸಲೀಲಾಖ್ಯ ವಿರಕ್ತಮಠದ ಚನ್ನಬಸವ ದೇಶಿಕೇಂದ್ರ ಮಹಾಸ್ವಾಮಿಗಳು, ಅಲ್ಲಮ ಪ್ರಭು ಮಹಾಸ್ವಾಮಿಗಳು, ಕಾರಂಜಿ ಮಠದ ಶ್ರೀ ಗುರುಸಿದ್ಧ ಸ್ವಾಮಿಗಳು, ಎಫ್. ಪಿ.ಡಬ್ಲ್ಯೂ ಟೆಕ್ನಾಲಜೀಸ್ನ ಸಹ ಸಂಸ್ಥಾಪಕರಾದ ಡಾ.ಬಸನಗೌಡ ಪಾಟೀಲ, ವಿಟಿಯು ಕುಲ ಸಚಿವರಾದ ಡಾ.ಪ್ರಸಾದ್ ರಾಂಪೂರೆ, ಸೇವಾರತ್ನ ಪ್ರಶಸ್ತಿ ಪುರಸ್ಕೃತರಾದ ಬಸಲಿಂಗಣ್ಣ ವಣ್ಣೂರ, ಕಾವೇರಿ ಕಿಲಾರಿ, ಬಾಳಪ್ಪ ದೊಡ್ಡಬಂಗಿ, ಚನ್ನಪ್ಪ ನರಸಣ್ಣವರ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು