11:28 PM Saturday2 - August 2025
ಬ್ರೇಕಿಂಗ್ ನ್ಯೂಸ್
SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ…

ಇತ್ತೀಚಿನ ಸುದ್ದಿ

14ರಂದು ‘ಸುವರ್ಣಯುಗ’ ಗ್ರಂಥ ಬಿಡುಗಡೆ: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಲೋಕಾರ್ಪಣೆ

12/01/2024, 19:13

ಮಂಗಳೂರು(reporterkarnataka.com): ತುಳು ನೆಲದ ಅಪೂರ್ವ ಪ್ರತಿಭೆ, ಜನಸೇವಕ, ಶಿಕ್ಷಣ ಪ್ರೇಮಿ, ಹೋಟೆಲ್ ಉದ್ಯಮಿ, ಬ್ಯಾಂಕಿಂಗ್ ಕ್ಷೇತ್ರದ ಮುತ್ಸದ್ದಿ, ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ ‘ಸುವರ್ಣಯುಗ’ ಕೃತಿ ಬಿಡುಗಡೆ ಸಮಾರಂಭ ಜನವರಿ 14ರಂದು ಸಂಜೆ 4ಗಂಟೆಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಜಯ ಸಿ. ಸುವರ್ಣ ಸಭಾಂಗಣದಲ್ಲಿ ನಡೆಯಲಿದೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಅಡ್ವೆ ರವೀಂದ್ರ ಪೂಜಾರಿ ಹೇಳಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಭಾರತ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕದ ವಿಧಾನಸಭೆ ಸ್ಪೀಕ‌ರ್ ಯು.ಟಿ.ಖಾದರ್ ಉದ್ಘಾಟಿಸುವರು. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಬಿಡುಗಡೆಗೊಳಿಸಲಿದ್ದಾರೆ. ನಿವೃತ್ತ ಪ್ರಾಧ್ಯಾಪಕರಾದ ಅಡ್ವೆ ರವೀಂದ್ರ ಪೂಜಾರಿ ಗ್ರಂಥವನ್ನು ಪರಿಚಯಿಸಲಿದ್ದಾರೆ. ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್. ಪದ್ಮರಾಜ್ ಅಭಿನಂದನಾ ಭಾಷಣ ಮಾಡುಲಿರುವರು ಎಂದು ಮಾಹಿತಿ ನೀಡಿದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ಗುರ್ಮೆ ಸುರೇಶ್ ಶೆಟ್ಟಿ, ಸುನೀಲ್ ಕುಮಾರ್, ಯಶಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಹರೀಶ್ ಕುಮಾರ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ,ಅಭಯಚಂದ್ರ ಜೈನ್, ಬಿ.ರಮಾನಾಥ ರೈ, ಮಾಜಿ ಶಾಸಕರಾದ ಕೆ.ವಸಂತ ಬಂಗೇರ, ಗೋಪಾಲ ಪೂಜಾರಿ, ರುಕ್ಮಯ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖರ್ ಕೋಟ್ಯಾನ್, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಅಖಿಲ ಭಾರತ ಬಿಲ್ಲವರ ಒಕ್ಕೂಟ ಅಧ್ಯಕ್ಷ ನವೀನಚಂದ್ರ ಡಿ.ಸುವರ್ಣ, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ.ಮೋಹನ್ ಆಳ್ವ, ಭಾರತ್ ಬ್ಯಾಂಕ್ ಮಾಜಿ ಉಪಾಧ್ಯಕ್ಷರಾದ ರೋಹಿಣಿ ಸಾಲಿಯಾನ್, ಉದ್ಯಮಿಗಳಾದ ರವಿ ಎಸ್.ಶೆಟ್ಟಿ, ಕೆಪಿಸಿಸಿ ಪ್ರಧಾನ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸಾಯಿ ಕೇರ್ ಲಾಜಿಸ್ಟಿಕ್ಸ್‌ನ ಸುರೇಂದ್ರ ಎ. ಪೂಜಾರಿ, ಬೆಂಗಳೂರು ಬಿಲ್ಲವ ಸಂಘದ ಅಧ್ಯಕ್ಷ ವೇದಕುಮಾರ್, ಕುದ್ರೋಳಿ ಕ್ಷೇತ್ರದ ಉಪಾಧ್ಯಕ್ಷೆ ಊರ್ಮಿಳಾ ರಮೇಶ್ ಕುಮಾರ್, ಶಶಿ ಎಂ. ಸಾಲಿಯಾನ್ , ಭಾಸ್ಕರ್ ಎಂ. ಸಾಲಿಯಾನ್ ಕುಟುಂಬಸ್ಥರು, ನಿತ್ಯಾನಂದ ಡಿ. ಕೋಟ್ಯಾನ್ ಸೇರಿ ಧಾರ್ಮಿಕ, ರಾಜಕೀಯ, ಸಾಮಾಜಿಕ ಕ್ಷೇತ್ರದ ಪ್ರತಿಷ್ಠಿತ ಗಣ್ಯರು ಉಪಸ್ಥಿತರಿರುವರು ಎಂದರು.
ನಮ್ಮ ಕುಡ್ಲ ವಾಹಿನಿ ಆಡಳಿತ ನಿರ್ದೇಶಕರಾದ ಲೀಲಾಕ್ಷ ಕರ್ಕೇರ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ದೇವೇಂದ್ರ ಪೂಜಾರಿ, ಭಾರತ್‌ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಸುದ್ದಿಗೋಷ್ಠಿಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು