12:29 PM Wednesday3 - December 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ

ಇತ್ತೀಚಿನ ಸುದ್ದಿ

150ರ ಸಂಭ್ರಮಕ್ಕೆ ಸಿದ್ಧತೆ: ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ

02/03/2023, 21:42

ಮಂಗಳೂರು(reporterkarnataka.com): ತುಳುನಾಡಿನ ಕಾರಣೀಕ ಕ್ಷೇತ್ರ ಕಂಕನಾಡಿ ಗರಡಿ ಬ್ರಹ್ಮಬೈದರ್ಕಳ ಕ್ಷೇತ್ರದ 150ನೇ ಗರಡಿ ಸಂಭ್ರಮಕ್ಕೆ ರಾಜ್ಯ ಸರಕಾರ, ಜಿಲ್ಲಾಡಳಿತದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು.
ಕಂಕನಾಡಿ ಗರಡಿ ಕ್ಷೇತ್ರಕ್ಕೆ ಗುರುವಾರ ಸಚಿವ ಸುನೀಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದ ಜತೆ ಮಾತನಾಡಿದರು.
ಗರಡಿ ಸಂಭ್ರಮದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಂಪೂರ್ಣ ವೆಚ್ಚವನ್ನು ಕನ್ನಡ ಸಂಸ್ಕೃತಿಕ ಇಲಾಖೆಯಿಂದ ನೀಡಲಾಗುವುದು. ಜಿಲ್ಲಾಡಳಿತದ ಜತೆ ಆಡಳಿತ ಮಂಡಳಿ ಈಗಾಗಲೇ ಸಭೆ ನಡೆಸಿದ್ದು, ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ಮಾ.6ರಂದು ಸಿಎಂ ಗರಡಿಗೆ: ಮಾ.6ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗರಡಿ ಕ್ಷೇತ್ರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಈ ನಿಟ್ಟಿನಲ್ಲೂ ಸಿದ್ಧತೆ ನಡೆಯುತ್ತಿದೆ ಎಂದರು.

ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಸಚಿವರಿಗೆ ಜಿಲ್ಲಾಡಳಿತ ಸಹಕಾರ ಹಾಗೂ ಇನ್ನಿತರ ತಯಾರಿ ಕುರಿತಂತೆ ಮಾಹಿತಿ ನೀಡಿದರು. ಈ ಸಂದರ್ಭ ಉಪಮೇಯರ್ ಪೂರ್ಣಿಮಾ, ಕಂಕನಾಡಿ ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್ ಉಜ್ಜೋಡಿ, ಕಾರ್ಪೊರೇಟರ್ ಸಂದೀಪ್ ಗರೋಡಿ, ಲೀಲಾವತಿ, ಕಂಕನಾಡಿ ಗರಡಿ ಕ್ಷೇತ್ರದ ಮೊಕ್ತೇಸರರಾದ ಜಗದೀಪ್ ಡಿ. ಸುವರ್ಣ, ಕಿಶೋರ್ ಮಜಿಲ, ದಿನೇಶ ಅಂಚನ್, ಆರ್ಥಿಕ ಸಮಿತಿ ಸಂಚಾಲಕ ಶರಣ್ ಪಂಪ್‌ವೆಲ್, ವಸಂತ್ ಪೂಜಾರಿ, ಸ್ವಾಗತ ಸಮಿತಿ ಸದಸ್ಯ ಉಮೇಶ್ ಸಾಲ್ಯಾನ್, ಪ್ರಕಾಶ್ ಗರೋಡಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು