ಇತ್ತೀಚಿನ ಸುದ್ದಿ
ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ: ಮಡಿದವರ ಆತ್ಮಕ್ಕೆ ಚಿರಶಾಂತಿ ಕೋರಿ ಮೇ 22ರಂದು ಶ್ರದ್ಧಾಂಜಲಿ
21/05/2025, 15:44

ಮಂಗಳೂರು(reporterkarnataka.com): 2010ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಮೇ 22ರಂದು ನಡೆಯಲಿದೆ.
ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಮಾಡುತ್ತಾ ಬಂದಿದೆ. ವಿಮಾನ ಅಪಘಾತದಲ್ಲಿ ಮರಣ ಹೊಂದಿದ 158 ಜನರ ನೆನಪಿಗಾಗಿ ಕೂಳೂರು ತಣ್ಣೀರು ಬಾವಿ ರಸ್ತೆಯಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಈ ಸ್ಥಳದಲ್ಲಿ ಮೇ 22 ರಂದು ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಚಿತ್ರ: ದಿ ಗಾರ್ಡಿಯನ್