9:06 AM Friday3 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

ಸಾಮಾಜಿಕ ಸುಧಾರಣೆಯ ಹರಿಕಾರ‌ ಕುದ್ಮುಲ್ ರಂಗರಾವ್ 166ನೇ ಜನ್ಮದಿನ: ಬಿಜೆಪಿಯಿಂದ ಸ್ಮಾರಕಕ್ಕೆ ಪುಷ್ಪ ನಮನ

29/06/2025, 23:37

ಮಂಗಳೂರು(reporterkarnataka.com):ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಪೂಜನೀಯ ಕುದ್ಮುಲ್ ರಂಗರಾವ್ ರವರ 166 ನೇ ಜನ್ಮದಿನದಂದು, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಬಿಜೆಪಿ ಮಂಗಳೂರು ನಗರ ದಕ್ಷಿಣದ ವತಿಯಿಂದ ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾರಸ್ವತ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ್ದ ರಂಗರಾಯರು ಶೋಷಿತರ ಅಭಿವೃದ್ಧಿಗಾಗಿ ತಮ್ಮ ಇಡೀ ಬದುಕನ್ನು ಮುಡಿಪಾಗಿಟ್ಟ ಮಹಾನ್ ಮಾನವತಾವಾದಿಗಳು. ಸಮಾಜದಲ್ಲಿ ಎಲ್ಲರಂತೆ ದಲಿತರೂ ಸಹ ಸ್ವಾಭಿಮಾನ, ಆತ್ಮ ಗೌರವದಿಂದ ಬದುಕಬೇಕು. ಅವರೂ ಸಹ ಉನ್ನತ ಶಿಕ್ಷಣ ಪಡೆದು ಸಮಾಜದ ಮುನ್ನಲೆಗೆ ಬರಬೇಕೆಂದು ತೀವ್ರ ಕಾಳಜಿ ವಹಿಸಿ ವಿರೋಧದ ನಡುವೆಯೂ ವಿಶೇಷ ಶಾಲೆಗಳನ್ನು ತೆರೆದರು. ಅಸ್ಪೃಶ್ಯತೆ ಹಾಗೂ ಶೋಷಣೆಯ ವಿರುದ್ಧ ಹೋರಾಡಿದ ಅವರನ್ನು ಮಹಾತ್ಮ ಗಾಂಧೀಜಿಯವರೂ ಸಹ ನನ್ನ ಗುರು ಎಂದು ಹೇಳಿಕೊಂಡಿದ್ದರು. ನಾನು ಮೊದಲ ಬಾರಿ ಚುನಾವಣೆಗೆ ನಿಂತಾಗ ಪೂಜ್ಯರ ಸಮಾಧಿಗೆ ಭೇಟಿ ನೀಡಿ ನಮಸ್ಕರಿಸಿದ ನಂತರವೇ ನಾಮಪತ್ರ ಸಲ್ಲಿಸಿದ್ದೆ. ಇಂತಹ ಮಹಾ ಮಾನವತಾವಾದಿಗಳ ಜನ್ಮದಿನವನ್ನು ಬಿಜೆಪಿ ಆಡಳಿತದ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಜಿಲ್ಲಾಡಳಿತದ ಮೂಲಕ ಪ್ರತಿವರ್ಷ ವಿಶೇಷವಾಗಿ ಆಚರಣೆ ಮಾಡಲಾಗುತ್ತಿತ್ತು. ಅದಕ್ಕಾಗಿ ಪಾಲಿಕೆಯಲ್ಲಿ ಅನುದಾನವನ್ನೂ ನಿಗದಿಪಡಿಸಲಾಗಿತ್ತು.
ಆದರೆ ಇದೀಗ ಆಡಳಿತದಲ್ಲಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ದಲಿತ ಸಮುದಾಯದ ಏಳಿಗೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಶ್ರೇಷ್ಠ ವ್ಯಕ್ತಿಯ ಜನ್ಮದಿನವನ್ನು ಆಚರಿಸದ ಸರ್ಕಾರದ ನಡೆಗೆ ದಲಿತ ಬಂಧುಗಳು ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿ ಸುಮಾರು ಮೂರುವರೆ ಕೋಟಿ ವೆಚ್ಚದಲ್ಲಿ ಪೂಜ್ಯರ ಸಮಾಧಿಯ ಉನ್ನತೀಕರಣಕ್ಕೆ ಶಿಲನ್ಯಾಸವನ್ನು ನೆರವೇರಿಸಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅದಕ್ಕೂ ತಡೆ ನೀಡಿರುವುದು ದುರಂತ ಎಂದರು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಬಿ.ಆರ್ ಹೃದಯನಾಥ್, ಉಪಾಧ್ಯಕ್ಷರಾದ ಶಾಮ ಕರ್ಕೇರ, ಪ್ರಧಾನ ಕಾರ್ಯದರ್ಶಿ ರಘುವೀರ್ ಬಾಬುಗುಡ್ಡ, ಉಪನ್ಯಾಸಕರಾದ ಪುಟ್ಟಸ್ವಾಮಿ, ಬಿಜೆಪಿ ಪ್ರಮುಖರಾದ ಮಾಜಿ ಮೇಯರ್ ಮನೋಜ್ ಕುಮಾರ್, ಭರತ್ ಕುಮಾರ್, ಮೋಹನ್ ಪೂಜಾರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಟ್ರಸ್ಟ್ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು