4:40 PM Wednesday28 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ಫಿಟ್ಸ್ ನಾಟಕವಾಡಿ ತಮಿಳುನಾಡು ಜೈಲಿಂದ 17 ಕೈದಿಗಳು ಎಸ್ಕೇಪ್!: ಇದು ರಾಜ್ಯ ಕಂಡ ಅತ್ಯಂತ ದೊಡ್ಡ ಜೈಲ್‌ ಬ್ರೇಕ್‌!

28/10/2026, 16:38

ಚೆನ್ನೈ(reporterkarnataka.com): ಸಹ ಕೈದಿಗೆ ಫಿಟ್ಸ್‌ ಬಂದಿದೆ ಎಂದು ನಾಟಕವಾಡಿ, ಸೆಲ್‌ ಬಾಗಿಲು ತೆರೆದ ಜೈಲಿನ ಸಿಬ್ಬಂದಿಗೆ ಮಾರಣಾಂತಿಕ ಹಲ್ಲೆ ಮಾಡಿ ಒಂದೇ ಸೆಲ್‌ನ 17 ಕೈದಿಗಳು ಸಿನಿಮೀಯ ಶೈಲಿಯಲ್ಲಿ ಪರಾರಿಯಾಗಿರುವ ಘಟನೆ ತಮಿಳುನಾಡಿನ ಥೇನಿ ಜಿಲ್ಲೆಯಲ್ಲಿ ನಡೆದಿದೆ. ಆದರೆ ಘಟನೆ ನಡೆದ 24 ಗಂಟೆಯೊಳಗೆ ಭಾರೀ ಪ್ರಮಾಣದ ತಪಾಸಣೆ ಕೈಗೊಂಡ ಪೊಲೀಸರು ಅಂತಿಮವಾಗಿ ಡ್ರೋನ್‌ಗಳನ್ನು ಬಳಸಿಕೊಂಡು 13 ಜನರನ್ನು ಮರಳಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ನಡುವೆ ಕಳೆದ 3 ದಶಕಗಳಲ್ಲೇ ರಾಜ್ಯ ಕಂಡ ಅತ್ಯಂತ ದೊಡ್ಡ ಜೈಲ್‌ ಬ್ರೇಕ್‌ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ವಿಜಯ್‌ ನೇತೃತ್ವದ ಸರ್ಕಾರ, ಕರ್ತವ್ಯ ಲೋಪದ ಮೇಲೆ 9 ಜೈಲು ಸಿಬ್ಬಂದಿಗಳನ್ನು ಅಮಾನತು ಮಾಡಿದೆ. ಅಲ್ಲದೆ ಈ ಕುರಿತು ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಮತ್ತೊಂದೆಡೆ ಘಟನೆಗೆ ಸರ್ಕಾರವನ್ನು ಹೊಣೆ ಮಾಡಿರುವ ವಿಪಕ್ಷ ಡಿಎಂಕೆ, ‘ ಹೊರಗಿರುವ ಅಪರಾಧಿಗಳು ಮುಕ್ತವಾಗಿ ಅಪರಾಧ ಎಸಗುತ್ತಿದ್ದಾರೆ. ಒಳಗಿರುವ ಕೈದಿಗಳು ಕೂಡ ಧೈರ್ಯವಾಗಿ ಪರಾರಿಯಾಗುತ್ತಿದ್ದಾರೆ. ಒಟ್ಟಿನಲ್ಲಿ ಈ ಸರ್ಕಾರ ಯಾರಿಗೂ ಪ್ರಯೋಜನವಾಗದ, ಸಂಪೂರ್ಣ ನಿಷ್ಪ್ರಯೋಜಕ ಸರ್ಕಾರವಾಗಿದೆ’ ಎಂದು ಎಕ್ಸ್‌ನಲ್ಲಿ ಕಿಡಿಕಾರಿದೆ.

*ಪಿಟ್ಸ್‌ ನಾಟಕ:*
ಥೇನಿ ಜಿಲ್ಲೆಯ ತೆಕ್ಕಂಪಟ್ಟಿಯಲ್ಲಿರುವ ಉಪ ಕಾರಾಗೃಹದಲ್ಲಿ 17 ವಿಚಾರಣಾಧೀನ ಕೈದಿಗಳು ತಪ್ಪಿಸಿಕೊಳ್ಳುವ ಯೋಜನೆ ರೂಪಿಸಿದ್ದರು. ಅದರಂತೆ ಸೋಮವಾರ ರಾತ್ರಿ ಕೈದಿಯೊಬ್ಬ ಮೂರ್ಛೆ ರೋಗ ಬಂದಂತೆ ನಟಿಸಿದ್ದಾನೆ. ಆಗ ಇತರರು ಕೂಗಿಕೊಂಡಿದ್ದಾರೆ. ಈ ವೇಳೆ ಜೈಲಿನ ಸಿಬ್ಬಂದಿಗಳು ಅಲ್ಲಿಗೆ ಹೋಗಿ ಬಾಗಿಲು ತೆರೆಯುತ್ತಿದ್ದಂತೆ ಜೈಲು ಸಿಬ್ಬಂದಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ 17 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು