ಇತ್ತೀಚಿನ ಸುದ್ದಿ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ
29/01/2026, 23:02
ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿದರು.



ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬಹುಭಾಷಾ ನಟ ಪ್ರಕಾಶ್ ರಾಜ್, ಖ್ಯಾತ ನಟಿ ರುಕ್ಮಿಣಿ ವಸಂತ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಚಲನಚಿತ್ರ ಅಕಾಡೆಮಿ ಸದಸ್ಯರಾದ ಚಿದಾನಂದ ಪಟೇಲ್ ಸೇರಿ ಹಲವರು ಉಪಸ್ಥಿತರಿದ್ದರು.












