6:38 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

18ನೇ ಲೋಕಸಭೆ ಪ್ರಥಮ ವಿಶೇಷ ಅಧಿವೇಶನ ಆರಂಭ: ಹಂಗಾಮಿ ಸ್ಪೀಕರ್ ಆಯ್ಕೆ; ನೂತನ ಸಂಸದರಿಂದ ಪ್ರತಿಜ್ಞೆ ವಿಧಿ

24/06/2024, 11:56

ನವದೆಹಲಿ(reporterkarnataka.com): 18ನೇ ಲೋಕಸಭೆಯ ಪ್ರಥಮ ವಿಶೇಷ ಅಧಿವೇಶನ ಇಂದಿನಿಂದ (ಜೂ 24) ಆರಂಭಗೊಂಡಿದ್ದು, ಜುಲೈ 3ರವರೆಗೆ ನಡೆಯಲಿದೆ.
ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ರೂಪುಗೊಂಡ ಎನ್ ಡಿಎ ಮೈತ್ರಿಕೂಟದ ಮೊದಲ ಅಧಿವೇಶನ ಇದಾಗಿದೆ. ಸದನದ ನಾಯಕ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷದ ನಾಯಕರು ಸೇರಿದಂತೆ ನೂತನವಾಗಿ ಆಯ್ಕೆಯಾದ ಸಂಸತ್‌ ಸದಸ್ಯರಿಂದ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಇದೇ ಸಂದರ್ಭದಲ್ಲಿ ಲೋಕಸಭೆಯ
ನೂತನ ಸ್ಪೀಕರ್‌ ಆಯ್ಕೆಗಾಗಿ ಚುನಾವಣೆ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ನೆರವೇರಲಿದೆ. ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭವಾಗಿದೆ. ಮೊದಲಿಗೆ ಪ್ರಧಾನಿ ಮೋದಿ, ಆ ಬಳಿಕ ಸಚಿವ ಸಂಪುಟದ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಂತರ ಅಸ್ಸಾಂನಿಂದ ಮೊದಲ್ಗೊಂಡು ಪಶ್ಚಿಮ ಬಂಗಾಳ ರಾಜ್ಯದ ಸದಸ್ಯರು ಕ್ರಮವಾಗಿ ಪ್ರಮಾಣ ವಚನ ಸ್ವೀಕರಿಸುವರು. 280 ಸದಸ್ಯರು ಸೋಮವಾರ ಹಾಗೂ 264 ಸದಸ್ಯರು ಮಂಗಳವಾರ ಪ್ರಮಾಣ ಸ್ವೀಕರಿಸಲಿದ್ದಾರೆ.
ಜೂ. 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆ ಚುನಾವಣೆ ಹಾಗೂ ಜೂ.27 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು