4:54 PM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

2 ದಿನಗಳ ರಾಜ್ಯ ಪ್ರವಾಸಕ್ಕೆ ತೆರೆ: ದೆಹಲಿಗೆ ನಿರ್ಗಮಿಸಿದ ಪ್ರಧಾನಿ ನರೇಂದ್ರ ಮೋದಿ

21/06/2022, 20:45

ಮೈಸೂರು(reporterkarnataka.com):

ಪ್ರಧಾನಿ ನರೇಂದ್ರ ಮೋದಿ ಅವರ 2 ದಿನಗಳ ಪ್ರವಾಸ ಮುಕ್ತಾಯಗೊಂಡಿದ್ದು, ಅವರು ಮೈಸೂರು ವಿಮಾನ ನಿಲ್ದಾಣದಿಂದ ದೆಹಲಿಗೆ ವಾಪಸಾಗಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ 8 ನೇ ಅಂತಾರಾಷ್ಟ್ರೀಯ ಯೋಗ ದಿನಾಚಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ರಾಜ್ಯದಲ್ಲಿ 33 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಲ್ಲದೆ ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ಸಮಗ್ರ ಡಿಜಿಟಲ್ ಯೋಗ ಪ್ರದರ್ಶನ ವೀಕ್ಷಣೆ, ವಸ್ತು ಸಂಗ್ರಹಾಲಯ ಉದ್ಘಾಟನೆ, ಮೊದಲಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು.

ಇದಲ್ಲದೆ ರಾಜಮಾತೆ ಪ್ರಮೋದಾ ದೇವಿ ಆಹ್ವಾನದಂತೆ ಮೈಸೂರು ಅರಮನೆಯಲ್ಲಿ ಉಪಹಾರವನ್ನೂ ಸೇವಿಸಿದ್ದರು. ಮೈಸೂರು ಅರಮನೆಯಿಂದ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ, ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು