10:16 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಡಿಕೆಶಿಗೆ 2 ಲಕ್ಷ ಮೆಣಸಿನಕಾಯಿ- ಬೆಳ್ಳುಳ್ಳಿ ಹಾರ: ದೃಷ್ಟಿ ತೆಗೆದ ಕಾರ್ಯಕರ್ತರು!

08/06/2026, 10:15

ಬೆಂಗಳೂರು(reporterkarnataka.com):ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರಕ್ಕೆ ಆಗಮಿಸಿದ ವೇಳೆ ಕ್ಷೇತ್ರದ ಕಾರ್ಯಕರ್ತರು ದೃಷ್ಟಿ ತೆಗೆಯುವ ಉದ್ದೇಶದಿಂದ ಒಣ ಮೆಣಸಿನಕಾಯಿ, ಹಸಿ ಮೆಣಸಿನಕಾಯಿ ಮತ್ತು ಬೆಳ್ಳುಳ್ಳಿ ಬಳಸಿ ಹಾರ ತಯಾರಿಸಿ ಸ್ವಾಗತ ಕೋರಿ ಮಹಿಳೆಯರು ದೃಷ್ಟಿ ತೆಗೆದರು.
ಮುಖ್ಯಮಂತ್ರಿಗಳ ಸ್ವಾಗತಕ್ಕಾಗಿ ಹಾರೋಹಳ್ಳಿ ಸರ್ಕಲ್ ಅನ್ನು ಸಂಪೂರ್ಣವಾಗಿ ಬಾಳೆಗಿಡ, ಬಂಟಿಂಗ್ಸ್ ಹಾಗೂ ಬೃಹತ್ ಫ್ಲೆಕ್ಸ್‌ಗಳಿಂದ ಸಿಂಗರಿಸಲಾಗಿತ್ತು . ಇಡೀ ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಿತ್ತು , ನೆಚ್ಚಿನ ನಾಯಕನನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನ ಜಮಾಯಿಸಿದ್ದರು .

*2 ಲಕ್ಷದ ಮೆಣಸಿನಕಾಯಿ-ಬೆಳ್ಳುಳ್ಳಿ ಹಾರ!*
ಈ ಬಾರಿ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೂವಿನ ಹಾರದ ಬದಲಾಗಿ ಅತ್ಯಂತ ವಿಭಿನ್ನವಾದ ಹಾರವನ್ನು ಹಾಕಲು ಅಭಿಮಾನಿಗಳು ಮುಂದಾಗಿದ್ದರು ಹಾರೋಹಳ್ಳಿ ಸರ್ಕಲ್‌ಗೆ ಸಿಎಂ ಆಗಮಿಸುತ್ತಿದ್ದಂತೆ ಅವರಿಗೆ ಹಸಿಮೆಣಸಿನಕಾಯಿ, ಕೆಂಪುಮೆಣಸಿನಕಾಯಿ ಹಾಗೂ ಬೆಳ್ಳುಳ್ಳಿಯನ್ನು ಬಳಸಿ ವಿಶೇಷವಾಗಿ ಸಿದ್ಧಪಡಿಸಿರುವ ಬೃಹತ್ ಹಾರವನ್ನು ಹಾಕಲಾಯಿತು
ಸುಮಾರು ಎರಡು ಲಕ್ಷ ರೂಪಾಯಿ ವೆಚ್ಚದಲ್ಲಿ ಈ ವಿಶಿಷ್ಟ ಹಾರವನ್ನು ತಯಾರಿಸಲಾಗಿದ್ದು, ಇದನ್ನು ಕ್ರೇನ್ ಮೂಲಕ ಡಿ.ಕೆ.ಶಿವಕುಮಾರ್ ಅವರಿಗೆ ಹಾಕಿ ಅಭಿಮಾನಿಗಳು ಸಂಭ್ರಮಿಸಲಿದರು ಇದರೊಂದಿಗೆ ನಾಯಕನ ಮೇಲೆ ಟ್ರ್ಯಾಕ್ಟರ್‌ಗಳಲ್ಲಿ ಟನ್‌ಗಟ್ಟಲೆ, ಮಲ್ಲಿಗೆ ಚೆಂಡುಹೂವು ಸುರಿಯ ಲಾಯಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು