9:53 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

2 ಸಾವಿರ ಕೋಟಿಗೂ ಅಧಿಕ ಅಭಿವೃದ್ಧಿ ಕಾರ್ಯ ನಡೆಸಿದ ಆತ್ಮತೃಪ್ತಿ ನನಗಿದೆ: ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ

05/03/2023, 22:46

ಸುರತ್ಕಲ್(reporterkarnataka.com):
ಸುಮಾರು 2 ಸಾವಿರ ಕೋಟಿ ರೂಪಾಯಿಗೂ ಮಿಕ್ಕಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆಯ ಅನುಷ್ಠಾನಗೊಳಿಸಿದ ಆತ್ಮತೃಪ್ತಿ ನನಗಿದೆ. ಈ ಸಾಧನೆ ಸಾಧಿಸಲು ಪಕ್ಷದ ಕಾರ್ಯಕರ್ತರ ಪ್ರೇರಣಾ ಶಕ್ತಿಯೇ ಕಾರಣವಾಗಿದೆ ಎಂದು ಶಾಸಕ ಡಾ ವೈ. ಭರತ್ ಶೆಟ್ಟಿ ಹೇಳಿದರು.
ಅವರು ಸುರತ್ಕಲ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಾಶಕ್ತಿ ಕೇಂದ್ರ ಸುರತ್ಕಲ್ 1 ಮತ್ತು 2 ವತಿಯಿಂದ ಹಮ್ಮಿಕೊಂಡ ಕುಟುಂಬ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಮಂಗಳೂರು ಉತ್ತರ ಕ್ಷೇತ್ರಕ್ಕೆ ಇಷ್ಟು ಅನುದಾನ ತಂದ ಉದಾಹರಣೆ ಇಲ್ಲ. ಅಭಿವೃದ್ಧಿ, ಅನುದಾನದ ಬಗ್ಗೆ ಯಾವುದೇ ಚರ್ಚೆಗೂಸಿದ್ಧ ಎಂದ ಅವರು ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಬಗ್ಗೆ ಟೀಕೆಗಳಿಗೆ ಯಾವುದೇ ಪುರಾವೆ ಇಲ್ಲ, ವ್ಯರ್ಥ ಅರೋಪಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದ ಅವರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದು ಐದು ವರ್ಷದ ಅಳ್ವಿಕೆ ನಡೆಸುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸುರತ್ಕಲ್ 1 ಮತ್ತು 2 ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ವಾರ್ಡುಗಳಲ್ಲಿ ಪಕ್ಷಕ್ಕಾಗಿ ಸೇವೆ ಸಲ್ಲಿಸುತ್ತಿರುವ ಪಕ್ಷದ ಹಿರಿಯ ಕಾರ್ಯಕರ್ತರನ್ನು ಶಾಸಕರು ಸನ್ಮಾನಿಸಿದರು.

ಬಹಳ ಅರ್ಥಪೂರ್ಣವಾಗಿ ನಡೆದ ಈ ಕುಟುಂಬ ಮಿಲನ ಕಾರ್ಯಕ್ರಮ ಎಲ್ಲಾ ಮಹಾಶಕ್ತಿ ಕೇಂದ್ರಗಳಲ್ಲಿಯೂ ನಡೆಯಲಿದೆ.
ಮಂಗಳೂರು ಉತ್ತರ ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಚುನಾವಣಾ ಉಸ್ತುವಾರಿ ಕೃಷ್ಣಶೆಟ್ಟಿ ಕಡಬ, ಜಿಲ್ಲಾ ಕಾರ್ಯದರ್ಶಿ ಪೂಜಾ ಪ್ರಶಾಂತ್ ಪೈ, ರಾಷ್ಟ್ರೀಯ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್, ಮಂಗಳೂರು ನಗರ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಕೊಟ್ಟಾರಿ, ಸಂದೀಪ್ ಪಚ್ಚನಾಡಿ, ಸುರತ್ಕಲ್ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಮಹೇಶ್ ಮೂರ್ತಿ ಸುರತ್ಕಲ್, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿಠಲ್ ಸಾಲ್ಯಾನ್ ಕುಳಾಯಿ, ಪ್ರಮುಖರಾದ ರಾಘವೇಂದ್ರ ಶಣೈ, ಮಂಡಲ ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಹಿಂದುಳಿದ ಮೋರ್ಚಾದ ಕಾರ್ಯದರ್ಶಿ ವಸಂತ ಹೊಸ ಬೆಟ್ಟು, ಯುವಮೋರ್ಚಾದ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಮನಪಾ ಸದಸ್ಯರುಗಳಾದ ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಲೋಕೇಶ್ ಬೊಳ್ಳಾಜೆ, ಲಕ್ಷೀ ಶೇಖರ ದೇವಾಡಿಗ, ಸರಿತಾ ಶಶಿಧರ, ನಯನಾ ಕೋಟ್ಯಾನ್, ವರುಣ್ ಚೌಟ, ವೇದಾವತಿ, ಸುಮಿತ್ರ ಕರಿಯ , ಸುನೀತಾ , ಪ್ರಶಾಂತ ಮೂಡಾಯಿಕೊಡಿ,ರಾಜೇಶ್ ಬೈಕಂಪಾಡಿ, ಪ್ರಮುಖರಾದ ದಿನಕರ ಇಡ್ಯಾ,ತಿಲಕ್ ರಾಜ್ ಅಮೀನ್ ಕೃಷ್ಣಾಪುರ, ದಿವೇಸ್ ಪೂಜಾರಿ, ಸುನಿಲ್ ಕುಳಾಯಿ, ಮನೀಷ್ ಸುರತ್ಕಲ್, ಯೋಗೀಶ್ ಸನಿಲ್, ಪಕ್ಷದ ವಿವಿಧ ಜವಾಬ್ದಾರಿಯುತ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು