1:16 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

2 ಸಾವಿರ ಹೆಕ್ಟರ್ ನಲ್ಲಿ ಆನೆಗಳ ವಿಹಾರಧಾಮ: ವಿಧಾನಸಭೆಯಲ್ಲಿ ಬೇಲೂರು ಶಾಸಕರ ಪ್ರಶ್ನೆಗೆ ಸಚಿವ ಈಶ್ವರ ಖಂಡ್ರೆ ಉತ್ತರ

12/12/2024, 21:05

ಬೆಳಗಾವಿ(reporterlarnataka.com): ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ವಿಧಾನಸಭೆಗಿಂದು ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಬೇಲೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿಯಿಂದ ಹಾನಿಗೊಳಗಾದ ಮಾನವ ಪ್ರಾಣಹಾನಿ ಮತ್ತು ಮಾನವ ಗಾಯ ಪ್ರಕರಣಗಳಿಗೆ ದಯಾತ್ಮಕ ಪರಿಹಾರ ಧನ ನೀಡಲಾಗುತ್ತಿದೆ ಎಂದರು.
ಹಾಸನ ಜಿಲ್ಲಾ ವ್ಯಾಪ್ತಿಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಗ್ರಾಮಗಳಲ್ಲಿ ಕಳೆದ 3 ತಿಂಗಳಿನಿಂದ ಕಾಡಾನೆಗಳು ಹಿಂಡು ಹಿಂಡಾಗಿ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ, ಈ ಕಾಡಾನೆಗಳನ್ನು ಅರಣ್ಯ ಪ್ರದೇಶಗಳ ಕಡೆಗೆ ಹಿಮ್ಮೆಟಿಸಲು ಇಲಾಖಾ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿರುತ್ತದೆ ಎಂದು ತಿಳಿಸಿದರು.
ಪ್ರತಿನಿತ್ಯ ಕಾಡಾನೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ಸಾರ್ವಜನಿಕರುನ್ನು ಸಂಪರ್ಕಿಸಿ ಆನೆಗಳ ಚಲನ-ವಲನಗಳ ಮಾಹಿತಿಯನ್ನು ನೀಡಿ ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕದ ಮೂಲಕ ತಿಳಿಸಲಾಗುತ್ತಿದೆ. ಆನೆ ಕಾರ್ಯ ಪಡೆ(ETF), ಕ್ಷಿಪ್ರ ಸ್ಪಂದನ ತಂಡ(RRT) ಮತ್ತು ಹಿಮ್ಮೆಟ್ಟಿಸುವ ಶಿಬಿರ ತಂಡದ (ADC) ಸಿಬ್ಬಂದಿಗಳೊಂದಿಗೆ ರಾತ್ರಿ ಗಸ್ತು ಕಾರ್ಯ ಕೈಗೊಂಡು ಸ್ಥಳೀಯ ಸಾರ್ವಜನಿಕರನ್ನು ಎಚ್ಚರಿಸುವ ಕ್ರಮ ಕೈಗೊಂಡಿವೆ ಎಂದರು.
ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಡಿಜಿಟಲ್ ಸೂಚನಾ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿಯನ್ನು ರವಾನಿಸಲಾಗುತ್ತಿರುತ್ತದೆ. ಆಕಾಶವಾಣಿ ಮುಖಾಂತರ ಹಾಗೂ ವಾಟ್ಸಾಪ್ ಗ್ರೂಪ್ ಗಳ ಮುಖಾಂತರ ಕಾಡಾನೆಗಳ ಚಲನ-ಚಲನ ಸಂದೇಶಗಳನ್ನು ರವಾನಿಸಲಾಗುತ್ತಿರುತ್ತದೆ, ಇಲಾಖಾ ವಾಹನಗಳಲ್ಲಿ ಪ್ರತಿನಿತ್ಯ ಕಾಡಾನೆಗಳಿರುವ ಸ್ಥಳಗಳಲ್ಲಿ ಗಸ್ತು ಮಾಡಿ ಧ್ವನಿವರ್ಧಕಗಳ ಮುಖಾಂತರ ಸಾರ್ವಜನಿಕರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ ಎಂದೂ ವಿವರಿಸಿದರು.
ವನ್ಯಪ್ರಾಣಿಗಳ ದಾಳಿಯಿಂದ ಮೃತಪಟ್ಟ ಕುಟುಂಬದ ಹತ್ತಿರದ ಬಂಧುಗಳಿಗೆ ಈ ಹಿಂದೆ ರೂ.7.50 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ಈಗ ರೂ.15.00 ಲಕ್ಷ ರೂ. ದಯಾತ್ಮಕ ಪರಿಹಾರ ನೀಡಲಾಗುತ್ತಿದೆ. ಜೊತೆಗೆ ಮಾಹೆಯಾನ ರೂ.4000.00 ರಂತೆ 5 ವರ್ಷಗಳ ಅವಧಿಗೆ ಮಾಸಾಶನ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದೂ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು