10:03 AM Tuesday26 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

2 ವರ್ಷ ಕಳೆದರೂ ಪೂರ್ಣಗೊಳ್ಳದ 5 ಕಿಮೀ ರಸ್ತೆ  ಡಾಮರೀಕರಣ: ಕುಡಿಯುವ ನೀರಿಗೂ ತತ್ವಾರ; ಪನ್ನೆ ನಿವಾಸಿಗಳಿಂದ ಪ್ರತಿಭಟನೆ ಎಚ್ಚರಿಕೆ

11/02/2022, 15:52

ಡಿ. ಕುಲಾಲ್ ಮೇಕೇರಿ ಮಡಿಕೇರಿ

info.reporterkarnataka.com

ಶಾಸಕರೇ ಶಿಲಾನ್ಯಾಸ ಮಾಡಿರುವ ರಸ್ತೆ ಕಾಮಗಾರಿಯು ನೆನೆಗುದಿಗೆ ಬಿದ್ದಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.


ಈ ರಸ್ತೆ ಕಾಮಗಾರಿಯ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು  ಕೇವಲ 3.1 ಕಿ ಮೀ ಮಾತ್ರ ಡಾಮರೀಕರಣ ಪೂರ್ಣಗೊಳಿಸಿದ್ದು,  ಬಾಕಿ ಉಳಿದಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಮಗಾರಿಗೆ ಹಣ ಬಿಡುಗಡೆಯಾಗಿಲ್ಲವೆಂದು ನಿಲ್ಲಿಸಿಬಿಟ್ಟಿದ್ದಾರೆ. ಹಾಗಾದರೆ ಶಾಸಕರ ನಿಧಿಯಲ್ಲಿ ಹಣವಿಲ್ಲವೇ ಎಂದು  ಗ್ರಾಮಸ್ಥರು ಪ್ರಶ್ನಿಸಿದ್ದಾರೆ.


ತುಂಡು ತುಂಡಾದ ನೀರಿನ ಪೈಪುಗಳು : ಈ ಅರ್ಧಂಬರ್ಧ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ಮನೆಗಳಿಗೆ ಸರಬರಾಜಾಗುತ್ತಿದ್ದ ನೀರಿನ ಪೈಪುಗಳು ತುಂಡಾಗಿದ್ದು,  ಕೆಲವು ಮನೆಗಳಿಗೆ ಕುಡಿಯುವ ನೀರಿಲ್ಲದೆ ಪರದಾಡಬೇಕಾಗಿದೆ. 

ಮನೆಗಳಿಗೆ ಧೂಳಿನ ಸಿಂಚನ : ಅಪೂರ್ಣ ರಸ್ತೆ ಕಾಮಗಾರಿಯಿಂದಾಗಿ ಇಲ್ಲಿನ ರಸ್ತೆ ಬದಿ ಇರುವ ಮನೆಗಳಿಗೆ ಮತ್ತು ಈ ರಸ್ತೆಯಲ್ಲಿ ಸಾಗುವ ಪ್ರವಾಸಿಗರಿಗೆ ಧೂಳಿನಿಂದಾಗಿ ಉಸಿರಾಡಲು ಕೂಡ ಕಷ್ಟಕರವಾಗಿದೆ.

ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಪಂಚಾಯಿತಿಯ ಅಧಿಕಾರಿಗಳಾಗಲಿ, ಸದಸ್ಯರಾಗಲಿ ಚಕಾರವೆತ್ತದೆ ಇರುವುದು ಇಲ್ಲಿನ ನಿವಾಸಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಸಂಬಂಧಪಟ್ಟವರು ಇತ್ತ ಗಮನಹರಿಸದಿದ್ದರೆ ಪ್ರತಿಭಟನೆ ಮಾಡಲಾಗುವುದು ಎಂದು ಸ್ಥಳೀಯ ನಿವಾಸಿಗಳು ಎಚ್ಚರಿಸಿದ್ದಾರೆ.

ರಸ್ತೆ ಕಾಮಗಾರಿ ಆರಂಭಿಸಿ ಸುಮಾರು ಎರಡು ವರ್ಷ ಕಳೆದು ಹೋಯಿತು. ಕೇವಲ 5 ಕಿಲೋ ಮೀಟರ್ ರಸ್ತೆ ಡಾಮರೀಕರಣಗೊಳಿಸಲು ಇನ್ನು ಎಷ್ಟು ವರ್ಷ ಬೇಕು. ನಮ್ಮ ಮನೆಯ ಕುಡಿಯುವ ನೀರಿನ ಸಂಪರ್ಕ ಪೈಪುಗಳನ್ನು ರಸ್ತೆ ಕೆಲಸ ಮಾಡುವಾಗ ತುಂಡು ಮಾಡಿ ಹಾಕಿದ್ದಾರೆ. ಕುಡಿಯುವ ನೀರಿಲ್ಲದೆ ಕಷ್ಟಪಡುತ್ತಿದ್ದೇವೆ. ಆದಷ್ಟು ಬೇಗ ನೀರಿನ ವ್ಯವಸ್ಥೆ ಕಲ್ಪಿಸಲಿ.

ಶ್ರೀನಿವಾಸ, ಪನ್ನೆ ನಿವಾಸಿ

ನಮ್ಮ ಕಷ್ಟ ಹೇಳಿಪ್ರಯೋಜನ ಇಲ್ಲ. ರಸ್ತೆಯ ಧೂಳುಗಳೆಲ್ಲ ಮನೆಯೊಳಗೆ ಬರುತ್ತಿದೆ.ನನ್ನ ಅಮ್ಮನಿಗೆ ಹುಷಾರಿಲ್ಲ. ಈ ಧೂಳಿನ ಸಮಸ್ಯೆಯಿಂದ ಅವರಿಗೆ ಉಸಿರಾಟದ ತೊಂದರೆ ಹೆಚ್ಚಾಗಿದ್ದು ಆಸ್ಪತ್ರೆಗೆ ಆಗಾಗ ಹೋಗುವಂತ ಪರಿಸ್ಥಿತಿ‌ ಉಂಟಾಗಿದೆ. ಆದಷ್ಟು ಬೇಗ ರಸ್ತೆಕಾಮಗಾರಿಯನ್ನು ಪೂರ್ತಿಗೊಳಿಸಲಿ.

ಮಂಜುನಾಥ, ಪನ್ನೆ ನಿವಾಸಿ

ಇತ್ತೀಚಿನ ಸುದ್ದಿ

ಜಾಹೀರಾತು