8:20 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು:  ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ

08/07/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಕಾಫಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡಲಾಗಿದ್ದು, ಆ ನಂತರ ಸತತವಾಗಿ ಸುರಿದ ಮಳೆಯಿಂದಾಗಿ ಕಾಫಿ ಫಸಲು ಹಾಗೂ ಎಲೆಗಳು ಉದುರಿರುವ ಸಾಧ್ಯತೆ ಇದ್ದು ಖಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಕಾಫಿ ಕಾಯಿ ಮತ್ತು ಎಲೆಯ ಮಾದರಿಗಳನ್ನು ಸಂಗ್ರಹಿಸಿದ್ದು ಸಂಶೋಧನೆಯ ನಂತರವಷ್ಟೆ ನೈಜ್ಯ ಕಾರಣ ತಿಳಿಯಲಿದೆ.


ಈ ಸಂದರ್ಭದಲ್ಲಿ ಕಾಫಿ ಸಂಶೋಧನಾ ಕೇಂದ್ರದ ಸಸ್ಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುಧಾ, ಸಸ್ಯರೋಗ ವಿಜ್ಞಾನಿಗಳಾದ ಡಾ.ಸಂತೋಷ್ ರೆಡ್ಡಿ, ಡಾ.ಸೋಮಶೇಖರ್ ಪಾಟೀಲ್, ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಡಾ.ಎನ್.ಚಂದ್ರಶೇಖರ್, ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು, ಕಾಫಿ ಬೆಳೆಗಾರರಾದ ಶಶಿ ಜಾವಳಿ, ಚನ್ನಕೇಶವಗೌಡ, ಪರೀಕ್ಷಿತ್ ಜಾವಳಿ, ಪ್ರದೀಪ್, ರಾಜೇಶ್, ಸತೀಶ್  ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆ ಸೇರಿಸಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸಬೇಕು ಎಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ನೆಲಕಚ್ಚುತ್ತಿದೆ. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಳೆಯಿಂದ ಕಾಫಿ ಬೆಳೆಯನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಹವಾಮಾನ ಆಧಾರಿತ ಬೆಳೆವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ತಿಳಿಸಿದ್ದಾರೆ.

ಇತರ ಬೆಳೆಗಳಿಗೆ ಈಗಾಗಲೇ ಹವಾಮಾನ ಆಧಾರಿತ ಬೆಳೆ ವಿಮೆ ಇದ್ದರೂ ಕೂಡ ವಿಮೆಯ ಮಾನದಂಡಗಳ ಬಗ್ಗೆ ಗೊಂದಲವಿದೆ. ವಿಮೆ ಕಂಪನಿಗಳು ಕೂಡ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳು, ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನು ರೈತರಿಗೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು