11:46 AM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

200 ಮೀ ಬಟರ್ಫ್ಲೈ: ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅನನ್ಯ ರಾಜ್ಯಮಟ್ಟಕ್ಕೆ ಆಯ್ಕೆ

19/08/2026, 11:39

ಬಂಟ್ವಾಳ(reporterkarnataka.com): ಕಲ್ಲಡ್ಕ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅನನ್ಯ ಎ ಆರ್ .200 ಮೀ ಬಟರ್ಫ್ಲೈ ಯಲ್ಲಿ ಚಿನ್ನ, 50 ಮೀ ಮತ್ತು 100 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿ ಪದಕ ಪಡೆದು ಬೆಂಗಳೂರಿನ ಥಣಿಸಂದ್ರ ದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಮಂಗಳೂರಿನ ಶಕ್ತಿ ವಿದ್ಯಾ ಕೇಂದ್ರದ ಈಜು ಕೊಳದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಸ್ಫರ್ಧೆ 14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ಅನನ್ಯ 200 ಮೀ ಬಟರ್ಫ್ಲೈ ಯಲ್ಲಿ ಚಿನ್ನ,50 ಮೀ ಮತ್ತು 100 ಮೀ ಬ್ಯಾಕ್ ಸ್ಟ್ರೋಕ್ ನಲ್ಲಿ ಬೆಳ್ಳಿ ಪದಕ ಪಡೆದು ಆಗಸ್ಟ್ 22.ರಂದು ಬೆಂಗಳೂರಿನ ಥಣಿಸಂದ್ರ ದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ರೇಷ್ಮೆ ಇಲಾಖೆಯ ನಿವೃತ್ತ ಇನ್ಸ್ಪೆಕ್ಟರ್ ಬಿ ಕೆ ನಾಯ್ಕ್ ಅವರ ಶಿಷ್ಯೆಯಾಗಿದ್ದು ಅಲೋಶಿಯಸ್ ಈಜು ಕೊಳದ ಮುಖ್ಯ ತರಬೇತುದಾರದ ಲೋಕರಾಜ್ ವಿಟ್ಲ, ತರಬೇತುದಾರರಾದ ಸಂಜಯ್ ಮತ್ತು ಗಗನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಅಶೋಕ್ ಕುಮಾರ್ ಬರಿಮಾರು ಮತ್ತು ರೋಹಿಣಿ ಬಿ. ಅವರ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು